Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

By Anu News
June 17, 2026 1 Min Read
0

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 3 ಕೆಜಿ 180 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಜೂನ್ 4ರಂದು ಹೆಬ್ಬಾಳ ಠಾಣೆಯ ಸಿಬ್ಬಂದಿಗೆ ಗುಡ್ಡದಹಳ್ಳಿ ಮುಖ್ಯ ರಸ್ತೆಯ ಪಿಳೇಕಮ್ಮ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬ ಕಾಲೇಜು ಬ್ಯಾಗ್‌ನಲ್ಲಿ ಹೈಡ್ರೋ ಗಾಂಜಾ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.

ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನ ಬಳಿಯಿದ್ದ ಬ್ಯಾಗ್ ಪರಿಶೀಲಿಸಿದಾಗ 3.18 ಕೆಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ.

ಬಂಧಿತನನ್ನು ವಿಚಾರಣೆ ನಡೆಸಿದಾಗ, ಮಹಾರಾಷ್ಟ್ರದ ನಾಸಿಕ್‌ನಿಂದ ಮಾದಕ ವಸ್ತುವನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿಸಿದ್ದಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಆರೋಪಿಯನ್ನು ಇಮ್ರಾನ್ ಪಾಷಾ ಅಲಿಯಾಸ್ ಚೇಲಾ ಇಮ್ರಾನ್ (36) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಈ ಹಿಂದೆ ಹಲವು ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ಬಿ.ಎಸ್. ನೇಮಗೌಡ ಅವರ ಮಾರ್ಗದರ್ಶನದಲ್ಲಿ, ಜೆ.ಸಿ.ನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೆ.ಎಸ್. ತನ್ನೀರ್ ನೇತೃತ್ವದಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಭೈರ ಹಾಗೂ ಸಬ್ ಇನ್ಸ್‌ಪೆಕ್ಟರ್ ವಿನೋದ ಜಿರಗಾಳೆ ಅವರ ತಂಡ ಕಾರ್ಯಾಚರಣೆ ನಡೆಸಿದೆ.

ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಸಿಬ್ಬಂದಿಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅಭಿನಂದಿಸಿದ್ದು, ಪ್ರಕರಣದ ಹಿಂದಿರುವ ಮಾದಕ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

Author

Anu News

Follow Me
Other Articles
Previous

ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ
    • ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್
    • 66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
    • UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ
    • ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ
    Copyright 2026 — ANU News. All rights reserved. Blogsy WordPress Theme