Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
Others

2-3 ದಿನ ರಾಜ್ಯದಲ್ಲಿ ವರುಣಾರ್ಭಟ ಸಾಧ್ಯತೆ; ಬೆಂಗಳೂರಿನಲ್ಲೂ ಮಳೆ ಸಂಭವ

By Anu News
June 15, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಮುಂದಿನ ಎರಡು ರಿಂದ ಮೂರು ದಿನಗಳ ಕಾಲ ವರುಣನ ಅಬ್ಬರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಚಟುವಟಿಕೆ ತೀವ್ರಗೊಳ್ಳಲಿದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹಲವೆಡೆ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬರಲಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಮಳೆ ಮತ್ತಷ್ಟು ಬಿರುಸು ಪಡೆಯುತ್ತಿರುವ ಹಿನ್ನೆಲೆ ತಗ್ಗು ಪ್ರದೇಶದ ನಿವಾಸಿಗಳು ಹಾಗೂ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ.

Author

Anu News

Follow Me
Other Articles
Previous

ʼರಸಗೊಬ್ಬರ ಅಭಾವʼ ಬಿಂಬಿಸಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಲು ಕಾಂಗ್ರೆಸ್ ಯತ್ನ ಎಂದ ಬಿಜೆಪಿ

Next

ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಮೋದಿ ಹೆಸರು ಬಳಸಬೇಡಿ; ಡಿಕೆಶಿಗೆ ತೇಜಸ್ವಿ ಸೂರ್ಯ ತರಾಟೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PM Modi urges secretaries to think beyond today, plan for India’s future
    • ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
    • Heavy rains trigger floods in MP, West Bengal; thousands evacuated
    • ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
    • Trump warns Iran of economic pressure; claims US controls key waterways
    Copyright 2026 — ANU News. All rights reserved. Blogsy WordPress Theme