Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

SIR: ಜಿಬಿಎ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 59.08 ಲಕ್ಷ ಮತದಾರರು

By ANU News
October 27, 2026 1 Min Read
0

ಬೆಂಗಳೂರು,: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂತಿಮ ಪಟ್ಟಿ ಪ್ರಕಟಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಒಟ್ಟು 59,08,151 ಮತದಾರರು ನೋಂದಣಿಯಾಗಿದ್ದಾರೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತೆ ಶಿಲ್ಪಾ ನಾಗ್ ತಿಳಿಸಿದ್ದಾರೆ.

ಅಂತಿಮ ಮತದಾರರ ಪಟ್ಟಿಯಲ್ಲಿ 28,67,256 ಪುರುಷರು, 30,40,221 ಮಹಿಳೆಯರು ಹಾಗೂ 674 ಇತರೆ ಮತದಾರರು ಸೇರಿದ್ದಾರೆ. ಪರಿಷ್ಕರಣೆ ಪ್ರಕ್ರಿಯೆಯಲ್ಲಿ 2,74,372 ಹೊಸ ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, 1,81,053 ಮತದಾರರ ವಿವರಗಳಲ್ಲಿ ಮಾರ್ಪಾಡು ಮಾಡಲಾಗಿದೆ. 65,881 ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಮೂಲಕ ಒಟ್ಟು ಮತದಾರರ ಸಂಖ್ಯೆಯಲ್ಲಿ ನಿವ್ವಳ 2,08,491ರಷ್ಟು ಹೆಚ್ಚಳವಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿ

ಮತದಾರರು ಯಾವುದೇ ಕಚೇರಿಗೆ ಭೇಟಿ ನೀಡದೆ ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕ ವೆಬ್‌ಸೈಟ್ ಮೂಲಕ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಬಹುದು. ಇದಕ್ಕಾಗಿ ceokarnataka.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಅಂತಿಮ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದ ಅರ್ಹ ನಾಗರಿಕರು ಅಗತ್ಯ ದಾಖಲೆಗಳೊಂದಿಗೆ ನಮೂನೆ–6 ಭರ್ತಿ ಮಾಡಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಶಿಲ್ಪಾ ನಾಗ್ ತಿಳಿಸಿದ್ದಾರೆ.

ಎಲ್ಲ ಅರ್ಹ ನಾಗರಿಕರು ಈ ಅವಕಾಶವನ್ನು ಬಳಸಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

Author

ANU News

Follow Me
Other Articles
Previous

Bengaluru Teachers’ constituency: NDA’s A.P. Ranganath defeats Puttanna by 908 votes

Next

ಸಂವಿಧಾನಿಕ ಸಂಸ್ಥೆಗಳ ವಿರುದ್ಧ ಅಪಪ್ರಚಾರಕ್ಕೆ ತಿರುಗೇಟು: ನ. 1ರಿಂದ ಬಿಜೆಪಿ ‘ಪ್ರಜಾಪ್ರಭುತ್ವ ಉಳಿಸಿ’ ಅಭಿಯಾನ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Andhra Pradesh on Alert as Cyclone Arnab Approaches; 2,199 Shelters Identified
    • Karnataka Final Voter List Published; 1.07 Crore Names Deleted, 6.83 Lakh New Voters Added
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ವೈಯಕ್ತಿಕ ಟೀಕೆಗಳು ಖಂಡನೀಯ: ರಮೇಶ್ ಬಾಬು
    • ಶಿಕ್ಷಕರ ಧ್ವನಿಯ ಗೆಲುವು: ವಿಶ್ವಾಸ ಉಳಿಸಿಕೊಂಡು ಕೆಲಸ ಮಾಡುತ್ತೇನೆ ಎಂದ ಪರಿಷತ್’ಗೆ ಆಯ್ಕೆಯಾದ ಎ.ಪಿ. ರಂಗನಾಥ್
    • ಕರ್ನಾಟಕದ ಅಂತಿಮ ಪಟ್ಟಿ ಪ್ರಕಟ: 1.07 ಕೋಟಿ ಹೆಸರುಗಳಿಗೆ ಕೊಕ್, 6.83 ಲಕ್ಷ ಮತದಾರರ ಸೇರ್ಪಡೆ
    Copyright 2026 — ANU News. All rights reserved. Blogsy WordPress Theme