Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ: ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ

By ANU News
November 1, 2026 1 Min Read
Comments Off on ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ: ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ

ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಕೆಂಪು-ಹಳದಿ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಜನನಿಯ ತನುಜಾತೆಯಾದ ಕನ್ನಡಮ್ಮನಿಗೆ ನಾಡಗೀತೆ ಇರುವಂತೆ, ಕನ್ನಡಿಗರ ಸ್ವಾಭಿಮಾನವನ್ನು ಪ್ರತಿನಿಧಿಸುವ ಅಧಿಕೃತ ನಾಡಧ್ವಜವೂ ಇರಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದರು.

ಈಗಾಗಲೇ ಕೆಂಪು-ಹಳದಿ ಬಾವುಟ ಕನ್ನಡಿಗರ ಭಾವನೆಗಳ ಹೆಗ್ಗುರುತಾಗಿದೆ. ಕನ್ನಡದ ಜ್ಞಾನ ಪರಂಪರೆ, ಸಂಸ್ಕೃತಿ, ಸರ್ವಧರ್ಮ ಸಮಾನತೆ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಈ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಿ ನಾಡಧ್ವಜವನ್ನಾಗಿ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ಭಾರತದ ಒಕ್ಕೂಟ ವ್ಯವಸ್ಥೆಯೊಳಗೆ ಕರ್ನಾಟಕದ ಅಸ್ಮಿತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಈ ವಿಚಾರವನ್ನು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

Author

ANU News

Follow Me
Other Articles
Previous

Kannada Must Be Language of the Heart, Not Just Official Language: CM D K Shivakumar

Next

Decision on Official Recognition for Kannada Flag to Be Taken After Belagavi Session: CM

Recent Posts

  • South India Braces for Cyclone Murasu; Andhra, Tamil Nadu, Telangana Step Up Precautions
  • ಬಂಗಾಳಕೊಲ್ಲಿಯಲ್ಲಿ ‘ಮುರಸು’ ಚಂಡಮಾರುತ ತೀವ್ರತೆ ಹೆಚ್ಚಳ; ದಕ್ಷಿಣ ಭಾರತಕ್ಕೆ ಆತಂಕ
  • ಮಹಾದೇವ್ ಬೆಟ್ಟಿಂಗ್ ಜಾಲ: ಪ್ರಮುಖ ಆರೋಪಿ ಸೌರಭ್ ಚಂದ್ರಾಕರ್ ನನ್ನು ಒಮಾನ್‌ನಲ್ಲಿ ಬಂಧಿಸಿ ಕರೆತಂದ ಸಿಬಿಐ
  • CBI Extradites Mahadev Betting Syndicate Promoter Sourabh Chandrakar from Oman
  • US Could ‘Shut Down’ Iran at Any Moment, Says Trump
Copyright 2026 — ANU News. All rights reserved. Blogsy WordPress Theme