Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ದೀಪಾವಳಿ ಪ್ರಯಾಣಿಕರ ಅನುಕೂಲಕ್ಕೆ ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ರೈಲು

By ANU News
November 6, 2026 1 Min Read
Comments Off on ದೀಪಾವಳಿ ಪ್ರಯಾಣಿಕರ ಅನುಕೂಲಕ್ಕೆ ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಈ ಕುರಿತು ನೈರುತ್ಯ ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ವಿಶೇಷ ರೈಲು ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರೈಲು ಸಂಖ್ಯೆ 06551 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 7 ಮತ್ತು 9ರಂದು ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ 06552 ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 8 ಮತ್ತು 10ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಬೆಂಗಳೂರು ತಲುಪಲಿದೆ.

ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೊಂಡಾ ಹಾಗೂ ಖಾನಾಪುರ ನಿಲ್ದಾಣಗಳಲ್ಲಿ ರೈಲುಗಳು ನಿಲುಗಡೆ ಹೊಂದಲಿವೆ. ಎರಡೂ ಮಾರ್ಗಗಳಲ್ಲಿ ತಲಾ ಎರಡು ಟ್ರಿಪ್‌ಗಳು ಸಂಚರಿಸಲಿವೆ.

ದೀಪಾವಳಿ ಸಂದರ್ಭದಲ್ಲಿ ಬೆಂಗಳೂರು, ಹುಬ್ಬಳ್ಳಿ ಮತ್ತು ಬೆಳಗಾವಿ ನಡುವೆ ಪ್ರಯಾಣಿಸುವವರಿಗೆ ಈ ಸೇವೆಯಿಂದ ಅನುಕೂಲವಾಗಲಿದೆ ಎಂದು ಜೋಶಿ ತಿಳಿಸಿದ್ದಾರೆ.

 

Author

ANU News

Follow Me
Other Articles
Previous

ಒಡಿಶಾ ಕರಾವಳಿಯಲ್ಲಿ ಪ್ರಲೇ ಕ್ಷಿಪಣಿಯ ಯಶಸ್ವಿ ಹಾರಾಟ ಪರೀಕ್ಷೆ ನಡೆಸಿದ ಡಿಆರ್‌ಡಿಒ

Next

Diwali Rush: Special Trains to Operate Between Bengaluru and Belagavi

Recent Posts

  • Vaibhav Suryavanshi Set for Record-Breaking Captaincy Stint at Just 15
  • ಕಿಕೆಟ್ ಅಂಗಳದಲ್ಲಿ ಹೊಸ ಇತಿಹಾಸ; 15 ವರ್ಷದ ವೈಭವ್’ಗೆ ಟಿ20 ತಂಡದ ನಾಯಕತ್ವ
  • Yemen: 30 Killed, 8 Injured in Airstrikes on Taiz Market
  • ಯೆಮೆನ್‌ನ ತೈಜ್ ಮಾರುಕಟ್ಟೆ ಮೇಲೆ ವೈಮಾನಿಕ ದಾಳಿ: 30 ಮಂದಿ ಸಾವು
  • Diwali 2026: K’taka minister Ramalinga Reddy Appeals to Public to Use Only Green Crackers
Copyright 2026 — ANU News. All rights reserved. Blogsy WordPress Theme