Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

FRPಗೆ ಹೆಚ್ಚುವರಿ ಪ್ರೋತ್ಸಾಹಧನ ಸೇರಿಸಿ ಕಬ್ಬಿಗೆ SAP ನಿಗದಿ ಮಾಡಿ; ನ. 20ರೊಳಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ; ಕುರುಬೂರು ಎಚ್ಚರಿಕೆ

By ANU News
November 7, 2026 1 Min Read
Comments Off on FRPಗೆ ಹೆಚ್ಚುವರಿ ಪ್ರೋತ್ಸಾಹಧನ ಸೇರಿಸಿ ಕಬ್ಬಿಗೆ SAP ನಿಗದಿ ಮಾಡಿ; ನ. 20ರೊಳಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ; ಕುರುಬೂರು ಎಚ್ಚರಿಕೆ

ಬೆಂಗಳೂರು: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ಕರ್ನಾಟಕದ ನೇತೃತ್ವದಲ್ಲಿ ಸಾವಿರಾರು ರೈತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ರಾಜ್ಯದ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಒತ್ತಾಯ ಪತ್ರ ಸಲ್ಲಿಸಲಾಯಿತು.

ಕಳೆದ ಎರಡು ತಿಂಗಳಿಂದ ಕಬ್ಬಿನ ಬೆಲೆಗಾಗಿ ಹೋರಾಡುತ್ತಿರುವ ಬೆಳಗಾವಿ ಜಿಲ್ಲೆಯ ರೈತರನ್ನು ಬಂಧಿಸಿ ಚಳವಳಿ ಹತ್ತಿಕ್ಕುತ್ತಿರುವ ಕ್ರಮವನ್ನು ಪ್ರತಿಭಟನಾಕಾರರು ಖಂಡಿಸಿದರು. ಜಿಲ್ಲೆಯಲ್ಲಿ ರೈತರನ್ನು ವಿಭಜಿಸುವ ರೀತಿಯಲ್ಲಿ ಅವೈಜ್ಞಾನಿಕ ಕಬ್ಬಿನ ದರ ನಿಗದಿಪಡಿಸಿರುವುದನ್ನು ತಿರಸ್ಕರಿಸುವ ನಿರ್ಣಯ ಕೈಗೊಂಡರು.

ಕಬ್ಬಿನ ಉಪ ಉತ್ಪನ್ನಗಳಿಂದ ಕಾರ್ಖಾನೆಗಳಿಗೆ ದೊರೆಯುವ ಲಾಭವನ್ನು ಪರಿಗಣಿಸಿ, ಕೇಂದ್ರದ ಎಫ್‌ಆರ್‌ಪಿ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿ ಪ್ರೋತ್ಸಾಹಧನ ಸೇರಿಸಿ ಎಸ್‌ಎಪಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ತಮಿಳುನಾಡಿನಲ್ಲಿ ಪ್ರತಿ ಟನ್ ಕಬ್ಬಿಗೆ ₹709 ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಪಂಜಾಬ್‌ನಲ್ಲಿ ₹4,480 ಎಸ್‌ಎಪಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಕಬ್ಬಿನ ಉತ್ಪಾದನಾ ವೆಚ್ಚ ₹4,440 ಎಂದು ಪರಿಗಣಿಸಿ, ಶೇ 10.25 ಸಕ್ಕರೆ ಇಳುವರಿಗೆ ಪ್ರತಿ ಟನ್‌ಗೆ ₹4,500 ದರ ನಿಗದಿಪಡಿಸುವಂತೆ ಕೇಂದ್ರವನ್ನು ಒತ್ತಾಯಿಸಬೇಕು. ಎಫ್‌ಆರ್‌ಪಿ ದರವನ್ನು ರೈತರ ಹೊಲದಲ್ಲಿಯೇ ಅನ್ವಯಿಸುವಂತೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಸಕ್ಕರೆ ಇಳುವರಿ ಮಾನದಂಡವನ್ನು ಶೇ 10.25ರಿಂದ ಶೇ 9.5ಕ್ಕೆ ಇಳಿಸಬೇಕು. ಕಬ್ಬಿನ ತೂಕ ಮತ್ತು ಸಕ್ಕರೆ ಇಳುವರಿಯಲ್ಲಿ ನಡೆಯುವ ಮೋಸ ತಡೆಯಲು ಕಠಿಣ ಕಾನೂನು ಜಾರಿಗೊಳಿಸಬೇಕು. ಎಥನಾಲ್ ಉತ್ಪಾದನೆಯ ಲಾಭದಲ್ಲಿ ರೈತರಿಗೂ ಪಾಲು ನೀಡಬೇಕು ಹಾಗೂ ಸಣ್ಣ ಪ್ರಮಾಣದ ಉತ್ಪಾದನೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ, ಕಬ್ಬಿನ ಹಣವನ್ನು 16 ದಿನಗಳೊಳಗೆ ಪಾವತಿಸುವಂತೆ ಕಾನೂನು ಜಾರಿಗೊಳಿಸಬೇಕು. ರೈತರ ಕೃಷಿ ಸಾಲ ಮನ್ನಾ, ಪ್ರತಿ ಎಕರೆಗೆ ₹25,000 ಬರ ಪರಿಹಾರ ಹಾಗೂ ರೈತರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನವೆಂಬರ್ 20ರೊಳಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಮನವಿ ಸ್ವೀಕರಿಸಿದ ಸಚಿವ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ರೈತ ಮುಖಂಡರ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

 

Author

ANU News

Follow Me
Other Articles
Previous

Karnataka Sugarcane Farmers Set November 20 Deadline for State to Announce SAP

Next

2027ರ ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Recent Posts

  • Panchamasali Community to Stage Hunger Strike in Belagavi on December 10
  • ಮೀಸಲಾತಿ ಹಕ್ಕೊತ್ತಾಯ; ಡಿ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿಗಳ ಉಪವಾಸ ಸತ್ಯಾಗ್ರಹ
  • Bengaluru Workshop Trains Officials on Child Marriage Prevention, Adoption Laws
  • ಬಾಲ್ಯವಿವಾಹ ಮುಕ್ತ ಭಾರತ ಅಭಿಯಾನ, ಅಂತರರಾಷ್ಟ್ರೀಯ ದತ್ತು ಮಾಸಾಚರಣೆ, ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ
  • Dispose of Praja Seva Andolana applications on time, K’taka minister tells officials
Copyright 2026 — ANU News. All rights reserved. Blogsy WordPress Theme