Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಬೆಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬಿಗಿ ಭದ್ರತೆ; 1,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

By Anu News
November 12, 2026 1 Min Read
Comments Off on ಬೆಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬಿಗಿ ಭದ್ರತೆ; 1,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬೆಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರಧಾನಿ ಸಂಚರಿಸುವ ರಸ್ತೆ ಮಾರ್ಗಗಳು, ನಮ್ಮ ಮೆಟ್ರೋ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ.

ಪ್ರಧಾನಿ ಭೇಟಿಗೂ ಸುಮಾರು 10 ದಿನಗಳ ಮುನ್ನವೇ ಬೆಂಗಳೂರಿಗೆ ಆಗಮಿಸಿರುವ ವಿಶೇಷ ರಕ್ಷಣಾ ಪಡೆ (SPG) ಅಧಿಕಾರಿಗಳು ಭದ್ರತಾ ಪರಿಶೀಲನೆ ನಡೆಸಿದ್ದಾರೆ. ಮೋದಿ ಸಂಚರಿಸಲಿರುವ ಮಾರ್ಗಗಳು, ಮೆಟ್ರೋ ಪ್ರಯಾಣದ ವ್ಯವಸ್ಥೆ ಹಾಗೂ ಕಾರ್ಯಕ್ರಮದ ಸ್ಥಳಗಳನ್ನು ಪರಿಶೀಲಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ನಿರಂತರ ನಿಗಾ ವಹಿಸಲಾಗುತ್ತಿದೆ.

ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿರುವ ಎತ್ತರದ ಕಟ್ಟಡಗಳ ಮೇಲೆಯೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಹೈರಿಸ್ಕ್ ಅಪಾರ್ಟ್‌ಮೆಂಟ್‌ಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೊಸದಾಗಿ ವಾಸಕ್ಕೆ ಬಂದವರ ಮಾಹಿತಿ ನೀಡುವಂತೆ ನಿವಾಸಿಗಳಿಗೆ ಸೂಚಿಸಲಾಗಿದೆ. ರಸ್ತೆಗಳಲ್ಲಿ ವಿಶೇಷ ತಪಾಸಣೆಯನ್ನೂ ಕೈಗೊಳ್ಳಲಾಗಿದೆ.

ಸೀಮಂತ್ ಕುಮಾರ್ ನೇತೃತ್ವದಲ್ಲಿ ಭದ್ರತೆ

ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೂವರು ಜಂಟಿ ಪೊಲೀಸ್ ಆಯುಕ್ತರು, 15 ಡಿಸಿಪಿಗಳು, 20 ಎಸಿಪಿಗಳು, 30 ಇನ್‌ಸ್ಪೆಕ್ಟರ್‌ಗಳು, 100ಕ್ಕೂ ಹೆಚ್ಚು ಸಬ್‌ಇನ್‌ಸ್ಪೆಕ್ಟರ್‌ಗಳು ಹಾಗೂ 1,000ಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಮೋದಿ ಕಾರ್ಯಕ್ರಮಗಳೇನು?

ನವೆಂಬರ್ 13ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿ, ಪ್ರಶಾಂತಿ ಕುಟೀರಂನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಚಾಲನೆ ನೀಡಲಿದ್ದಾರೆ.

ನಂತರ ತಾವರೆಕೆರೆಯಿಂದ ಐಐಎಂ ಬೆಂಗಳೂರು ಮೆಟ್ರೋ ನಿಲ್ದಾಣದವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಇದೇ ವೇಳೆ ₹15,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Author

Anu News

Follow Me
Other Articles
Previous

Sudhakar Demands Probe into Alleged Irregularities in Gantlamallamma Reservoir Land Acquisition

Next

PM Modi’s Bengaluru visit: Over 1,000 police personnel deployed for security

Recent Posts

  • Kannada film ‘Maarige Daari’, directed by Agastya
  • Trailer of Kannada Film ‘Maarige Daari’ Unveiled
  • Allari Naresh’s ‘Alcohol’ to Release on December 18
  • ಡಿಸೆಂಬರ್ 18ಕ್ಕೆ ಅಲ್ಲರಿ ನರೇಶ್ ಅಭಿನಯದ ‘ಆಲ್ಕೋಹಾಲ್’ ತೆರೆಗೆ
  • ‘ಕಾಲಿ ಖೇತಿ’; ಗ್ರಾಮೀಣ ಹಾರರ್ ಕಥೆಯಲ್ಲಿ ಜಾಕಿ ಶ್ರಾಫ್, ಶರದ್ ಕೆಲ್ಕರ್
Copyright 2026 — ANU News. All rights reserved. Blogsy WordPress Theme