Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಪರಿಶಿಷ್ಟ ಪಂಗಡದ ಯೋಜನೆಗಳ ಮಾಹಿತಿಗಾಗಿ ರಾಜ್ಯ ಸರ್ಕಾರದಿಂದ ನೀಡಲು ವಿಶೇಷ ಆ್ಯಪ್

By ANU News
November 24, 2026 1 Min Read
Comments Off on ಪರಿಶಿಷ್ಟ ಪಂಗಡದ ಯೋಜನೆಗಳ ಮಾಹಿತಿಗಾಗಿ ರಾಜ್ಯ ಸರ್ಕಾರದಿಂದ ನೀಡಲು ವಿಶೇಷ ಆ್ಯಪ್

ಮೈಸೂರು, ನ.25: ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಮೂಲಕ ದೊರೆಯುವ ಸೌಲಭ್ಯಗಳು ಮತ್ತು ಯೋಜನೆಗಳ ಮಾಹಿತಿ ಒಂದೇ ವೇದಿಕೆಯಲ್ಲಿ ಲಭ್ಯವಾಗುವಂತೆ ವಿಶೇಷ ಆ್ಯಪ್ ಅಭಿವೃದ್ಧಿಪಡಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, 50ಕ್ಕೂ ಹೆಚ್ಚು ಉಪಜಾತಿಗಳಿಗೆ ಜಾರಿಯಲ್ಲಿರುವ ಯೋಜನೆಗಳ ವಿವರವನ್ನು ಆ್ಯಪ್ ಮೂಲಕ ಒದಗಿಸಲಾಗುವುದು ಎಂದರು.

ಯುವಕರ ಉದ್ಯೋಗಕ್ಕಾಗಿ ಫುಡ್ ಕಿಯೋಸ್ಕ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ರಾಜ್ಯದಲ್ಲಿ ಮೊದಲ ಬಾರಿಗೆ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಗೂ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

ವಿವಿಧ ಹಾಡಿಗಳಿಗೆ ಭೇಟಿ ನೀಡಿದಾಗ ಮೂಲಸೌಕರ್ಯಗಳ ಕೊರತೆ ಕಂಡುಬಂದಿದ್ದು, ಅವುಗಳನ್ನು ಸರಿಪಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಹಾಡಿಗಳ ನಿವಾಸಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಸೂಚಿಸಿದರು.

ಪಡಿತರ ಚೀಟಿ ಪಡೆಯಲು ಆಧಾರ್ ಮತ್ತು ಆದಾಯ ಪ್ರಮಾಣಪತ್ರ ಅಗತ್ಯವಿರುವುದರಿಂದ, ದಾಖಲೆಗಳಿಲ್ಲದವರನ್ನು ಸಮೀಕ್ಷೆ ಮೂಲಕ ಗುರುತಿಸಿ ವಿಶೇಷ ಶಿಬಿರ ಆಯೋಜಿಸಿ ಅವುಗಳನ್ನು ಒದಗಿಸುವಂತೆ ಸೂಚಿಸಿದರು.

ಕೆ.ಆರ್.ಐ.ಡಿ.ಎಲ್ ವತಿಯಿಂದ ಹಾಡಿಗಳಲ್ಲಿ 100 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, 15 ಮನೆಗಳು ಪೂರ್ಣಗೊಂಡಿವೆ. ಉಳಿದ 85 ಮನೆಗಳನ್ನು ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮನೆ ನಿರ್ಮಾಣಕ್ಕೆ ಅನುದಾನದ ಕೊರತೆಯಿಲ್ಲ ಎಂದರು.

ಶಾಸಕ ಸಿ. ಅನಿಲ್ ಚಿಕ್ಕಮಾದು ಮಾತನಾಡಿ, ಕಾಡಿನಿಂದ ಹೊರತಂದು ಕಾಡಂಚಿನಲ್ಲಿ ನಿವೇಶನ ನೀಡಿರುವ ಆದಿವಾಸಿಗಳಿಗೆ ಹಕ್ಕುಪತ್ರ ನೀಡದಿರುವುದರಿಂದ ಮನೆ ನಿರ್ಮಾಣಕ್ಕೆ ತೊಂದರೆಯಾಗುತ್ತಿದೆ ಎಂದರು. ಜಿಲ್ಲಾಧಿಕಾರಿಗಳು ಸಮಸ್ಯೆಗಳ ಕುರಿತು ವರದಿ ನೀಡಿದರೆ ಅರಣ್ಯ ಸಚಿವರೊಂದಿಗೆ ಚರ್ಚಿಸಿ ಪರಿಹರಿಸುವುದಾಗಿ ರಘುಮೂರ್ತಿ ತಿಳಿಸಿದರು.

ಸಭೆಯಲ್ಲಿ ಶಾಸಕ ಜಿ.ಡಿ. ಹರೀಶ್ ಗೌಡ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

BJP MLC C.T. Ravi Seeks K’taka Governor’s Intervention in ASHA Workers’ Protest

Next

ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ರಮ್ಯಾ ಬೆಂಬಲ: ಸರ್ಕಾರ ಬೇಡಿಕೆ ಈಡೇರಿಸುತ್ತದೆ ಎಂದು ವಿಶ್ವಾಸ

Recent Posts

  • Karnataka Plans Single Digital Platform for Urban Local Body Services
  • ಸಿಎಂ ಮನವಿಗೂ ಜಗ್ಗದ ಆಶಾ ಕಾರ್ಯಕರ್ತೆಯರು; 9ನೇ ದಿನವೂ ವನಿತೆಯರ ಹೋರಾಟ
  • Karnataka ASHA Workers Reject CM’s Appeal, Continue Protest for Ninth Day
  • Actress Ramya Backs ASHA Workers’ Protest, Says Govt Must Honour ₹10,000 Pay Promise
  • ನ್ಯೂಜಿಲೆಂಡ್ ವಿರುದ್ಧ ಹಾಕಿ ಸರಣಿ ಗೆದ್ದ ಭಾರತ; 1-0 ಅಂತರದಲ್ಲಿ ಸರಣಿ ವಶ
Copyright 2026 — ANU News. All rights reserved. Blogsy WordPress Theme