Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

By Anu News
June 10, 2026 1 Min Read
0

​ಮಂಗಳೂರು : ತುಳುನಾಡು ಶಾಂತಿ, ಸಹಬಾಳ್ವೆ ಮತ್ತು ಭ್ರಾತೃತ್ವದ ನೆಲೆವೀಡು. ನಮ್ಮ ಈ ಪುಣ್ಯಭೂಮಿಯ ಪರಂಪರೆ ಮತ್ತು ಸಂಸ್ಕೃತಿ ನಮಗೆ ಹೆಮ್ಮೆಯ ವಿಷಯ. ಆದರೆ, ಇತ್ತೀಚೆಗೆ ‘ಅನಿತಾ ಕಾಸರಗೋಡು’ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಅತ್ಯಂತ ಆಕ್ಷೇಪಾರ್ಹವಾಗಿದ್ದು, ನಮ್ಮ ಸುಂದರ ಸಮಾಜದ ಸೌಹಾರ್ದತೆಯನ್ನು ಹಾಳುಮಾಡುವ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುವಂತಿದೆ. ಇಂತಹ ಅಮಾನವೀಯ ಕೃತ್ಯವು ಪ್ರತಿಯೊಬ್ಬ ಶಾಂತಿಪ್ರಿಯ ನಾಗರಿಕನಿಗೂ ನೋವನ್ನುಂಟು ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅವರು ಕೂಡಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಕೂಡಲೇ ಮಧ್ಯಪ್ರವೇಶಿಸಿ, ದ್ವೇಷ ಭಾಷಣ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಪದ್ಮರಾಜ್ ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ ಅಥವಾ ಶಕ್ತಿ ನಮ್ಮ ನಾಡಿನ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದರೆ, ಅದನ್ನು ನಾವು ಸಹಿಸಲು ಸಾಧ್ಯವಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಅಂತಹ ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸಲೇಬೇಕು. ಪ್ರತಿಯೊಬ್ಬರೂ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Author

Anu News

Follow Me
Other Articles
Previous

ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

Next

‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಕಾಮನ್‌ವೆಲ್ತ್: ಭಾರತೀಯ ವೇಟ್‌ಲಿಫ್ಟರ್ ರಿಷಿಕಾಂತ ಸಿಂಗ್’ಗೆ ಬೆಳ್ಳಿ, ಮೋದಿ ಅಭಿನಂದನೆ
    • Karnataka to raise BPL card income limit to ₹3 lakh, no cards to be cancelled: Muniyappa
    • PM Modi praises Rishikanta Singh Chanambam for silver medal and personal best
    • ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಳ: ಯಾವುದೇ ಬಿಪಿಎಲ್ ಕಾರ್ಡ್ ರದ್ದು ಇಲ್ಲ
    • ಕಾಮನ್‌ವೆಲ್ತ್: ಮಹಿಳೆಯರ 48 ಕೆಜಿ ವೇಟ್‌ಲಿಫ್ಟಿಂಗ್’ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಚಾನು
    Copyright 2026 — ANU News. All rights reserved. Blogsy WordPress Theme