Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

By Anu News
June 12, 2026 1 Min Read
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಹಿನ್ನೆಲೆಯಲ್ಲಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಒಂದು ಸ್ಥಾನವನ್ನು ಬಿಜೆಪಿ ಪಡೆದುಕೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಹಿಂಪಡೆಯುವ ಅವಧಿ ಮುಕ್ತಾಯಗೊಂಡ ಬಳಿಕ ಯಾವುದೇ ಅಭ್ಯರ್ಥಿ ಎದುರಾಳಿಯಾಗಿ ಉಳಿಯದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅವರು ಈ ಕುರಿತು ಅಧಿಕೃತ ಘೋಷಣೆ ಮಾಡಿದರು.

ರಾಜ್ಯಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಮೂರು ಸ್ಥಾನಗಳು ಲಭಿಸಿರುವುದು ಹಾಗೂ ಬಿಜೆಪಿ ಒಂದು ಸ್ಥಾನ ಪಡೆದಿರುವುದು ವಿಧಾನಸಭೆಯಲ್ಲಿನ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ನಡೆದಿದೆ.

Author

Anu News

Follow Me
Other Articles
Previous

‘ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ’

Next

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..
    • Centre strengthens anti-drug enforcement, expands NCB network across India
    • Ramesh Babu seeks safeguards against wrongful deletion of voters in Karnataka
    • ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT
    • NCERT expands multilingual learning resources as Centre promotes mother tongue-based education
    Copyright 2026 — ANU News. All rights reserved. Blogsy WordPress Theme