Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಅನಧಿಕೃತ ಪಾರ್ಕಿಂಗ್‌ಗೆ ಬ್ರೇಕ್: ಬೆಂಗಳೂರಿನಲ್ಲಿ ಮತ್ತೆ ಆರಂಭವಾಗಲಿದೆ ಟೋಯಿಂಗ್ ಕಾರ್ಯಾಚರಣೆ

By ANU News
June 21, 2026 1 Min Read
0

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಮುಂದಿನ ವಾರದಿಂದ ಟೋಯಿಂಗ್ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ.

ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಲಯ ವ್ಯಾಪ್ತಿಯಲ್ಲಿ ಅನಧಿಕೃತ ವಾಹನ ಪಾರ್ಕಿಂಗ್ ನಿಯಂತ್ರಣಕ್ಕಾಗಿ ಮೂರು ನೂತನ ಟೋಯಿಂಗ್ ವಾಹನಗಳನ್ನು ಕಾರ್ಯಾಚರಣೆಗೆ ಇಳಿಸಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಾಧಿಕಾರ, ಮುಂದಿನ ವಾರದಿಂದ ಜಯನಗರ ವಲಯದಲ್ಲಿ ಕಟ್ಟುನಿಟ್ಟಿನ ಟೋಯಿಂಗ್ ಕಾರ್ಯಾಚರಣೆ ಜಾರಿಯಾಗಲಿದೆ ಎಂದು ಹೇಳಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅವರು ಶನಿವಾರ ಟೋಯಿಂಗ್ ವಾಹನಗಳನ್ನು ಪರಿಶೀಲನೆ ನಡೆಸಿದರು.

ಸಂಚಾರ ದಟ್ಟಣೆ ಕಡಿಮೆ ಮಾಡುವುದು, ಪಾದಚಾರಿಗಳ ಸುರಕ್ಷತೆಗೆ ಆದ್ಯತೆ ನೀಡುವುದು ಹಾಗೂ ಅಸಮರ್ಪಕ ಪಾರ್ಕಿಂಗ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ.

ಸಾರಿಗೆ ಇಲಾಖೆಯಿಂದ ಫಿಟ್ನೆಸ್ ಪ್ರಮಾಣಪತ್ರ ಪಡೆದಿರುವ ಟೋಯಿಂಗ್ ವಾಹನಗಳನ್ನು ಶೀಘ್ರದಲ್ಲೇ ಸಂಚಾರ ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ. ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಿರುವ ವಾಹನಗಳ ವಿರುದ್ಧ ಟೋಯಿಂಗ್ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

Author

ANU News

Follow Me
Other Articles
Previous

Two killed after bus suffers tyre burst, rams bike in Kolar

Next

ರಕ್ಷಣಾ ಕ್ಷೇತ್ರದಲ್ಲಿ ತಾಂತ್ರಿಕ ಸನ್ನದ್ಧತೆ, ಸ್ವಾವಲಂಬನೆ ಅಗತ್ಯ: ರಾಜನಾಥ್ ಸಿಂಗ್

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PM Modi urges secretaries to think beyond today, plan for India’s future
    • ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
    • Heavy rains trigger floods in MP, West Bengal; thousands evacuated
    • ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
    • Trump warns Iran of economic pressure; claims US controls key waterways
    Copyright 2026 — ANU News. All rights reserved. Blogsy WordPress Theme