Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

‘ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಕಾಂಗ್ರೆಸ್’ನವರಿಗೆ ಇದು ಗೊತ್ತಿಲ್ಲ’ ಎಂದ ಜೋಶಿ

By ANU News
June 22, 2026 1 Min Read
0

ಬೆಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಹೊರಟಿವೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಶಿ, “ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಹಿಂದೂ ರಾಷ್ಟ್ರವನ್ನು ಮಾಡಲು ಹೊರಟಿಲ್ಲ. ಈ ದೇಶ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಸಿದ್ದರಾಮಯ್ಯ ಅವರಿಗೆ ಇದು ಗೊತ್ತಿಲ್ಲ” ಎಂದು ಹೇಳಿದರು.

“ಈ ದೇಶ ಹಿಂದೂ ರಾಷ್ಟ್ರವಲ್ಲ ಎಂದು ಹೇಳುವುದಾದರೆ ಇಲ್ಲಿ ಪ್ರಜಾಪ್ರಭುತ್ವವೇ ಉಳಿಯುತ್ತಿರಲಿಲ್ಲ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ದೇಶಗಳ ಉದಾಹರಣೆಗಳು ನಮ್ಮ ಮುಂದಿವೆ. ಹಿಂದೂ ಬಹುಸಂಖ್ಯಾತರು ಇಲ್ಲದಿದ್ದರೆ ಪ್ರಜಾಪ್ರಭುತ್ವವೂ ಇರುವುದಿಲ್ಲ, ಮತದಾನದ ಹಕ್ಕೂ ಉಳಿಯುವುದಿಲ್ಲ” ಎಂದು ಜೋಶಿ ವಾದಿಸಿದರು.

ಸಿದ್ದರಾಮಯ್ಯ ಅವರನ್ನು ಟೀಕಿಸಿದ ಅವರು, “ತಮ್ಮ ಮಗನನ್ನು ಮಂತ್ರಿಯನ್ನಾಗಿ ಮಾಡಿದ್ದರೂ ಅದನ್ನೇ ಮುಂದಿಟ್ಟುಕೊಂಡು ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು” ಎಂದು ಕಿಡಿಕಾರಿದರು.

Author

ANU News

Follow Me
Other Articles
Previous

ಅಮೆರಿಕ–ಇರಾನ್ ಶಾಂತಿ ಮಾತುಕತೆ ಭಗ್ನ; ಸಭೆಯಿಂದ ದಿಢೀರ್ ನಿರ್ಗಮಿಸಿದ ನಿಯೋಗ

Next

ಇರಾನ್ ಮೇಲಿನ ಕೆಲವು ನಿರ್ಬಂಧ ಸಡಿಲಿಕೆ; ತೈಲ ರಫ್ತಿಗೆ ಅಮೆರಿಕ ಅವಕಾಶ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PM Modi urges secretaries to think beyond today, plan for India’s future
    • ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
    • Heavy rains trigger floods in MP, West Bengal; thousands evacuated
    • ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
    • Trump warns Iran of economic pressure; claims US controls key waterways
    Copyright 2026 — ANU News. All rights reserved. Blogsy WordPress Theme