Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

ರಾಜ್ಯದಲ್ಲಿ ಬರಗಾಲ ಘೋಷಿಸಿ ಅಗತ್ಯ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

By ANU News
June 28, 2026 1 Min Read
0

ಹುಬ್ಬಳ್ಳಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಇನ್ನೊಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಕರ್ನಾಟಕ ಸಂಪೂರ್ಣ ಬರಗಾಲದತ್ತ ಸಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ತಕ್ಷಣವೇ ಬರಗಾಲ ಘೋಷಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಶೇ.70ರಷ್ಟು ಪ್ರದೇಶಗಳಲ್ಲಿ ಇನ್ನೂ ಬಿತ್ತನೆ ಆರಂಭವಾಗಿಲ್ಲ. ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮುಂದಿನ ಒಂದು ವಾರದಲ್ಲಿಯೂ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯಲಿದೆ ಎಂದು ಹೇಳಿದರು.

ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಎಲ್ಲ ಜಿಲ್ಲಾಧಿಕಾರಿಗಳ ಸಭೆ ನಡೆಸಿ ವಾಸ್ತವ ಸ್ಥಿತಿಯ ವರದಿ ಪಡೆಯಬೇಕು. ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕು. ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಹಣ ಲಭ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಸಿದರೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ನೆರವು ಪಡೆಯಲು ಸಾಧ್ಯವಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೆರೆ ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯಕ್ಕೆ ಪೂರ್ಣಾವಧಿಯ ಕೃಷಿ ಸಚಿವರೇ ಇಲ್ಲದಿರುವುದು ದುರದೃಷ್ಟಕರ. ಎರಡು ಅಥವಾ ಮೂರು ಜಿಲ್ಲೆಗಳಿಗೆ ಒಬ್ಬ ಸಚಿವರನ್ನು ನೇಮಿಸಿರುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅವರು ಟೀಕಿಸಿದರು.

ಎಲ್ ನೀನೋ ಪರಿಣಾಮ ಹಾಗೂ ಸಂಭವನೀಯ ಬರ ಪರಿಸ್ಥಿತಿಯ ಕುರಿತು ರಾಷ್ಟ್ರೀಯ ಮಟ್ಟದ ವರದಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದರೂ ರಾಜ್ಯ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಕ್ಷಣ ಬರ ಪರಿಸ್ಥಿತಿ ನಿರ್ವಹಣೆಗೆ ಆದ್ಯತೆ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

Author

ANU News

Follow Me
Other Articles
Previous

ವಿವಿಧ ಹುದ್ದೆಗಳ ನೇರ ನೇಮಕಾತಿಗೆ UPSC ಅರ್ಜಿ ಆಹ್ವಾನ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ರಾಜ್ಯದಲ್ಲಿ ಬರಗಾಲ ಘೋಷಿಸಿ ಅಗತ್ಯ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ
    • ವಿವಿಧ ಹುದ್ದೆಗಳ ನೇರ ನೇಮಕಾತಿಗೆ UPSC ಅರ್ಜಿ ಆಹ್ವಾನ
    • ಎರಡು ವರ್ಷಗಳಲ್ಲಿ 500 ನಗರಗಳಿಗೆ ಭಾರತ್ ಟ್ಯಾಕ್ಸಿ ವಿಸ್ತರಣೆ: ಅಮಿತ್ ಶಾ
    • Hariprasad Condemns Slipper-Throwing Incident at MLA Pradeep Easwar
    • ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆತ; ಹರಿಪ್ರಸಾದ್ ಖಂಡನೆ
    Copyright 2026 — ANU News. All rights reserved. Blogsy WordPress Theme