Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

‘ಗೃಹಜ್ಯೋತಿ’ ಅಕ್ರಮ ಫಲಾನುಭವಿಗಳ ಪತ್ತೆಗೆ SIR ಮಾದರಿಯಲ್ಲಿ ಮನೆ-ಮನೆ ಪರಿಶೀಲನೆಗೆ ಚಾಲನೆ

By ANU News
July 1, 2026 1 Min Read
0

ಬೆಂಗಳೂರು: ಚುನಾವಣಾ ಆಯೋಗ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುತ್ತಿರುವ ನಡುವೆಯೇ, ರಾಜ್ಯ ಸರ್ಕಾರವೂ ತನ್ನ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ಮುಂದಾಗಿದೆ. ಯೋಜನೆಯ ಅಕ್ರಮ ಫಲಾನುಭವಿಗಳನ್ನು ಗುರುತಿಸಿ ಕೈಬಿಡುವ ಉದ್ದೇಶದಿಂದ ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಪರಿಶೀಲನೆ ವೇಳೆ ಮೊಬೈಲ್ ಆ್ಯಪ್ ಹಾಗೂ ಘೋಷಣಾ ಪತ್ರದ ಮೂಲಕ ಫಲಾನುಭವಿಗಳ ವಿವರಗಳನ್ನು ಸಂಗ್ರಹಿಸಲಾಗುತ್ತದೆ. ಈ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುವವರಾದರೆ ಬಾಡಿಗೆ ಒಪ್ಪಂದ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲನೆಗೆ ಸಿದ್ಧವಾಗಿಡುವಂತೆ ಬೆಸ್ಕಾಂ ಮನವಿ ಮಾಡಿದೆ.

ಮೀಟರ್ ರೀಡರ್‌ಗಳ ಮೂಲಕ ಸ್ಥಳದಲ್ಲೇ ಪರಿಶೀಲನೆ ನಡೆಸುವುದು ಈ ಪ್ರಕ್ರಿಯೆಯ ಪ್ರಮುಖ ಭಾಗವಾಗಿದ್ದು, ಗ್ರಾಹಕರು ಹಾಗೂ ಫಲಾನುಭವಿಗಳು ಸಂಪೂರ್ಣ ಸಹಕಾರ ನೀಡುವಂತೆ ಇಂಧನ ಇಲಾಖೆ ಕೋರಿದೆ.

ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಗೃಹ ಬಳಕೆದಾರರಿಗೆ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಸೌಲಭ್ಯ ಕೇವಲ ಗೃಹ ಬಳಕೆದಾರರಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಯೋಜನೆಯ ಪ್ರಯೋಜನ ಪಡೆಯಲು ಫಲಾನುಭವಿಯು ಕರ್ನಾಟಕದ ನಿವಾಸಿಯಾಗಿರಬೇಕು. ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಯೋಜನೆಯ ಲಾಭ ದೊರೆಯಲಿದ್ದು, ಒಂದು ಆಧಾರ್ ಸಂಖ್ಯೆಗೆ ಒಂದೇ ವಿದ್ಯುತ್ ಮೀಟರ್‌ಗೆ ಮಾತ್ರ ರಿಯಾಯಿತಿ ನೀಡಲಾಗುತ್ತದೆ.

Author

ANU News

Follow Me
Other Articles
Previous

Commercial LPG cylinder price cut by Rs 183.50 from July 1, offers relief to businesses

Next

ಮಹಿಳಾ ಟಿ20 ವಿಶ್ವಕಪ್: ವೆಸ್ಟ್ ಇಂಡೀಸ್‌ಗೆ ಮಣಿಸಿದ ಆಸ್ಟ್ರೇಲಿಯಾ ಫೈನಲ್‌ಗೆ ಲಗ್ಗೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘What does caste certificate have to do with free electricity?’: JD(S) targets Karnataka govt over Gruha Jyothi verification
    • ‘ಗೃಹಜ್ಯೋತಿ ಕರೆಂಟಿಗೂ ಜಾತಿ ಪ್ರಮಾಣಕ್ಕೂ ಏನು ಸಂಬಂಧ?’; ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಟೀಕಾಸ್ತ್ರ
    • No BJP leaders in Ayodhya trust, Congress making false allegations: CT Ravi
    • ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ
    • ಗೃಹಲಕ್ಷ್ಮಿ ಹಣ ಅಕ್ರಮ ಆರೋಪ; ಸಿಎಜಿ ವರದಿ ಸಂಬಂಧ ವಿಶೇಷ ತನಿಖೆಗೆ ಸಿ.ಟಿ.ರವಿ ಆಗ್ರಹ
    Copyright 2026 — ANU News. All rights reserved. Blogsy WordPress Theme