Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್: ವೆಸ್ಟ್ ಇಂಡೀಸ್‌ಗೆ ಮಣಿಸಿದ ಆಸ್ಟ್ರೇಲಿಯಾ ಫೈನಲ್‌ಗೆ ಲಗ್ಗೆ

By ANU News
July 1, 2026 1 Min Read
0

ಲಂಡನ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಪ್ರದರ್ಶನ ನೀಡಿ ಫೈನಲ್‌ಗೆ ಪ್ರವೇಶಿಸಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದ ಆಸ್ಟ್ರೇಲಿಯಾ, ದಾಖಲೆಯ 8ನೇ ಬಾರಿ ಟಿ20 ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಬ್ಯಾಟರ್‌ಗಳನ್ನು ನಿಯಂತ್ರಿತ ಬೌಲಿಂಗ್ ಮೂಲಕ ಕಟ್ಟಿ ಹಾಕಿತು. ಪರಿಣಾಮ, ನಿಗದಿತ 20 ಓವರ್‌ಗಳಲ್ಲಿ ವೆಸ್ಟ್ ಇಂಡೀಸ್ 7 ವಿಕೆಟ್ ಕಳೆದುಕೊಂಡು 125 ರನ್‌ಗಳಿಸಲಷ್ಟೇ ಶಕ್ತವಾಯಿತು.

126 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಗೆ ಆರಂಭಿಕ ಹಿನ್ನಡೆಯಾದರೂ, ಅನುಭವಿ ಬ್ಯಾಟರ್ ಬೆತ್ ಮೂನಿ ಜವಾಬ್ದಾರಿಯುತ ಆಟವಾಡಿದರು. ಜಾರ್ಜಿಯಾ ವೋಲ್ (16) ಹಾಗೂ ಫೋಬೆ ಲಿಚ್‌ಫೀಲ್ಡ್ (4) ಬೇಗನೆ ಔಟಾದರೂ, ಮೂನಿ ಕೇವಲ 36 ಎಸೆತಗಳಲ್ಲಿ 8 ಬೌಂಡರಿಗಳ ನೆರವಿನಿಂದ ಅಜೇಯ 61 ರನ್ ಸಿಡಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.

ಆಸ್ಟ್ರೇಲಿಯಾ ಕೇವಲ 13 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿ, ಇನ್ನೂ 42 ಎಸೆತಗಳು ಬಾಕಿ ಇರುವಾಗಲೇ ಗೆಲುವು ದಾಖಲಿಸಿತು. ಈ ಜಯದೊಂದಿಗೆ ಆಸ್ಟ್ರೇಲಿಯಾ ಮಹಿಳಾ ತಂಡ ಮತ್ತೊಮ್ಮೆ ತನ್ನ ಪ್ರಾಬಲ್ಯ ಮೆರೆದಿದ್ದು, ಟಿ20 ವಿಶ್ವಕಪ್ ಪ್ರಶಸ್ತಿಗಾಗಿ ಫೈನಲ್‌ನಲ್ಲಿ ಸೆಣಸಲು ಸಜ್ಜಾಗಿದೆ.

Author

ANU News

Follow Me
Other Articles
Previous

‘ಗೃಹಜ್ಯೋತಿ’ ಅಕ್ರಮ ಫಲಾನುಭವಿಗಳ ಪತ್ತೆಗೆ SIR ಮಾದರಿಯಲ್ಲಿ ಮನೆ-ಮನೆ ಪರಿಶೀಲನೆಗೆ ಚಾಲನೆ

Next

Australia storm into Women’s T20 World Cup final with commanding win over West Indies

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme