Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

By ANU News
July 2, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ಸಂಬಂಧಿತ ಇಲಾಖೆಗಳು ನಿರಂತರ ನಿಗಾ ವಹಿಸಿ ನಿಯಮಗಳ ಅನುಷ್ಠಾನವನ್ನು ಖಚಿತಪಡಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ನಡೆಯುತ್ತಿದ್ದರೂ ಯಾರ ಮೇಲೂ ಕ್ರಮ ಆಗಿಲ್ಲ. ಇದೇ ಕಾರಣಕ್ಕೆ ಇಂತಹ ಘಟನೆಗಳು ಮರುಕಳಿಸುತ್ತಿವೆ. ಕ್ವಾರಿ ಮಾಲೀಕರು ಕೂಡ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಘೋಷಿಸುವುದರ ಜೊತೆಗೆ ಅಗತ್ಯ ತುರ್ತು ನೆರವು ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Author

ANU News

Follow Me
Other Articles
Previous

DVS audio leak row: Too early to comment without facts, says BJP chief Vijayendra

Next

No action despite recurring quarry tragedies, says HD Kumaraswamy

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • India to Tour Sri Lanka in August; Two-Test Series Schedule Announced
    • ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ
    • Amarnath Yatra Begins; PM Modi Urges Pilgrims to Follow Five Resolutions
    • India to Tour Sri Lanka in August; Two-Test Series Schedule Announced
    • ಆಗಸ್ಟ್‌ನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ; ಎರಡು ಟೆಸ್ಟ್ ಪಂದ್ಯಗಳ ವೇಳಾಪಟ್ಟಿ ಪ್ರಕಟ
    Copyright 2026 — ANU News. All rights reserved. Blogsy WordPress Theme