Skip to content
ANU News
ANU News
  • Home
  • Home
ANU News
ANU News
  • Home
  • Home
ದೇಶ

ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

By ANU News
July 19, 2026 1 Min Read
0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೌರಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಪೂಂಚ್ ಜಿಲ್ಲೆಯ ಸುರಂಕೋಟ್ ತಹಸಿಲ್‌ನ ಬುಫ್ಲಿಯಾಜ್‌ನ ಲೋವರ್ ಮುರ್ರಾ ಪ್ರದೇಶದಲ್ಲಿ ಪ್ರವಾಹದ ಹೊಡೆತಕ್ಕೆ ಸಿಲುಕಿದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಮೃತರಲ್ಲಿ ಎಂಟು ಮಂದಿಯನ್ನು ಗುರುತಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.

ಪ್ರವಾಹದಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಉರುಳಿಬಿದ್ದಿದ್ದು, ಮೊಬೈಲ್ ನೆಟ್‌ವರ್ಕ್ ಸೇವೆ ಅಸ್ತವ್ಯಸ್ತಗೊಂಡಿದೆ. ಪೊಲೀಸರು, ಎಸ್‌ಡಿಆರ್‌ಎಫ್ ಸಿಬ್ಬಂದಿ, ನಾಗರಿಕ ಆಡಳಿತ ಹಾಗೂ ಸ್ಥಳೀಯರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೊಘಲ್ ರಸ್ತೆ ಹಾಗೂ ರಾಜೌರಿ–ಪೂಂಚ್ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಹಾಗೂ ಸಂತ್ರಸ್ತರಿಗೆ ತಕ್ಷಣ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ನಡುವೆ, ಜುಲೈ 23ರವರೆಗೆ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕಟ್ಟೆಚ್ಚರ ಅಧಿಕಾರಿಗಳು ತಿಳಿಸಿದ್ದಾರೆ.

Author

ANU News

Follow Me
Other Articles
Previous

MP Cabinet clears Uniform Civil Code Bill, to be tabled in Assembly

Next

Flash floods claim 10 lives in J&K; search on for missing persons

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘ಭಿಕ್ಷಾಟನೆ ಮುಕ್ತ ಭಾರತ’ ಗುರಿ; SMILE ಯೋಜನೆ 295 ನಗರಗಳಿಗೆ ವಿಸ್ತರಣೆ
    • Centre expands SMILE scheme to 295 cities by 2030-31 in push for ‘Begging-Free India’
    • Four-laning of key Telangana highways to improve connectivity to pilgrimage hubs, industrial centres
    • ರಾಜಮಾರ್ಗಯಾತ್ರ ಆ್ಯಪ್‌ನಲ್ಲಿ ಡಿಜಿಟಲ್ ಲೋಕಲ್ ಪಾಸ್, AI ಸಹಾಯ ಕೇಂದ್ರ ಆರಂಭ
    • NHAI launches digital Local Pass, AI-powered MargMitra help centre on RajmargYatra app
    Copyright 2026 — ANU News. All rights reserved. Blogsy WordPress Theme