Skip to content
ANU News
ANU News
  • Home
  • Home
ANU News
ANU News
  • Home
  • Home
ಸಿನಿಮಾ

ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

By ANU News
July 20, 2026 1 Min Read
0

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್‌ಗಳು ಹಾಗೂ ನಕಲಿ ಖಾತೆಗಳ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್‌ವುಡ್ ನಟಿ ಐಶ್ವರ್ಯ ಸಿಂದೋಗಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳಿಗೆ ನಿರಂತರವಾಗಿ ಅಶ್ಲೀಲ, ಅವಹೇಳನಕಾರಿ ಹಾಗೂ ಮಾನಹಾನಿಕರ ಕಾಮೆಂಟ್‌ಗಳು ಬರುತ್ತಿವೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕೃತ್ಯಕ್ಕೆ ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬನೇ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಈ ಹಿಂದೆ ಇದೇ ವ್ಯಕ್ತಿ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಅದೇ ವ್ಯಕ್ತಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿರುವುದಾಗಿ ಐಶ್ವರ್ಯ ಸಿಂದೋಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಿರುಕುಳ ನೀಡುತ್ತಿರುವ ನಕಲಿ ಖಾತೆಗಳ ಕುರಿತು ಸಮಗ್ರ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಟಿ ಪೊಲೀಸರನ್ನು ಮನವಿ ಮಾಡಿದ್ದಾರೆ. ದೂರಿನ ಆಧಾರದಲ್ಲಿ ಸಂಜಯ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚೆಗೆ ನಟಿಯರಾದ ರಮ್ಯಾ ಹಾಗೂ ವಿಜಯಲಕ್ಷ್ಮಿ ದರ್ಶನ್ ಅವರಿಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್‌ಗಳು ಬಂದಿದ್ದ ಪ್ರಕರಣಗಳು ದಾಖಲಾಗಿದ್ದವು. ಆ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ನಟಿಯರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಕಿರುಕುಳದ ಘಟನೆಗಳು ಮುಂದುವರಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Author

ANU News

Follow Me
Other Articles
Previous

Flash floods claim 10 lives in J&K; search on for missing persons

Next

Sandalwood actor Aishwarya Sindogi approaches police over cyber harassment

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Rescue operation intensifies after Sikkim tunnel disaster; toxic gas hampers efforts
    • ಸಿಕ್ಕಿಂ ಸುರಂಗ ದುರಂತ: 8 ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    • Siddaramaiah seeks Dharmendra Pradhan’s removal over NEET row, slams police action
    • ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ
    • ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದಾಳಿ ಖಂಡನೀಯ; ಕಾಂಗ್ರೆಸ್ ಆಕ್ರೋಶ
    Copyright 2026 — ANU News. All rights reserved. Blogsy WordPress Theme