Skip to content
ANU News
ANU News
  • Home
  • Home
ANU News
ANU News
  • Home
  • Home
ದೇಶ

ನೀಟ್ ವಿವಾದದ ಪ್ರತಿಧ್ವನಿ; ‘ಚಲೋ ಸಂಸದ್’ ಮೆರವಣಿಗೆ ವೇಳೆ ಲಾಠಿ ಚಾರ್ಜ್

By ANU News
July 20, 2026 1 Min Read
0

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಯಿತು.

ಜಂತರ್ ಮಂತರ್‌ನಿಂದ ಸಂಸತ್ತಿನತ್ತ ಮೆರವಣಿಗೆ ( ‘ಚಲೋ ಸಂಸದ್’) ನಡೆಸಲು ಪ್ರತಿಭಟನಾಕಾರರು ಯತ್ನಿಸಿದ ವೇಳೆ ಪೊಲೀಸರು ತಡೆದಿದ್ದು, ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಹಾಗೂ ತಳ್ಳಾಟ ಉಂಟಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಪ್ರತಿಭಟನಾ ಸ್ಥಳದಲ್ಲಿ ಹಲವು ರಾಜಕೀಯ ನಾಯಕರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು. ಆಜಾದ್ ಸಮಾಜ ಪಾರ್ಟಿ-ಕಾನ್ಶಿರಾಮ್ ಅಧ್ಯಕ್ಷ ಹಾಗೂ ಸಂಸದ ಚಂದ್ರಶೇಖರ್ ಆಜಾದ್, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಹಲವು ಗಣ್ಯರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ಭದ್ರತಾ ಕಾರಣಗಳಿಂದ ಸಂಸತ್ ಪ್ರದೇಶದಲ್ಲಿ ಮೆರವಣಿಗೆಗೆ ಪೂರ್ವಾನುಮತಿ ನೀಡಲಾಗಿರಲಿಲ್ಲ. ಪ್ರತಿಭಟನಾ ಪ್ರದೇಶದ ಹೊರಗೆ ಐದಕ್ಕಿಂತ ಹೆಚ್ಚು ಜನರು ಸೇರದಂತೆ ನಿರ್ಬಂಧ ಹೇರಲಾಗಿತ್ತು. ಆದೇಶ ಉಲ್ಲಂಘಿಸಿ ಸಂಸತ್ ಕಡೆಗೆ ತೆರಳಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು.

ಕಾನೂನು ಸುವ್ಯವಸ್ಥೆ ಕಾಪಾಡಲು ನಾಗರಿಕರು ಅನಧಿಕೃತ ಪ್ರತಿಭಟನೆಗಳಲ್ಲಿ ಭಾಗವಹಿಸಬಾರದು ಹಾಗೂ ಪೊಲೀಸರೊಂದಿಗೆ ಸಹಕರಿಸುವಂತೆ ದೆಹಲಿ ಪೊಲೀಸರು ಮನವಿ ಮಾಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Author

ANU News

Follow Me
Other Articles
Previous

‘ಟೆರರಿಸಂ’ ಹಿಂದಿದೆ ಪಿತೂರಿ? ರಹಸ್ಯ ಬಯಲು ಮಾಡಿದ ನಿವೃತ್ತ MHA ಅಧಿಕಾರಿ, ಸ್ವತಂತ್ರ ತನಿಖೆಗೆ CRF ಒತ್ತಾಯ

Next

‘Chalo Sansad’ march over NEET paper leak halted in Delhi; protesters, police clash

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Rescue operation intensifies after Sikkim tunnel disaster; toxic gas hampers efforts
    • ಸಿಕ್ಕಿಂ ಸುರಂಗ ದುರಂತ: 8 ಮಂದಿ ಸಾವು; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
    • Siddaramaiah seeks Dharmendra Pradhan’s removal over NEET row, slams police action
    • ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಕೇಂದ್ರದ ನಡೆಗೆ ಸಿದ್ದರಾಮಯ್ಯ ಆಕ್ಷೇಪ
    • ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದಾಳಿ ಖಂಡನೀಯ; ಕಾಂಗ್ರೆಸ್ ಆಕ್ರೋಶ
    Copyright 2026 — ANU News. All rights reserved. Blogsy WordPress Theme