Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಸಿನಿಮಾ

ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

By ANU News
July 29, 2026 1 Min Read
0

ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ರಾಮಾಯಣ’ ಟ್ರೇಲರ್ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಯಶ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಬಿಗ್‌ಬಜೆಟ್ ಚಿತ್ರದ ಟ್ರೇಲರ್ ಜುಲೈ 30ರಂದು ಬೆಳಗಿನ ಜಾವ 4.15ಕ್ಕೆ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಅಧಿಕೃತವಾಗಿ ಘೋಷಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟರ್ ಹಂಚಿಕೊಂಡಿರುವ ನಮಿತ್ ಮಲ್ಹೋತ್ರಾ, ‘ದಿ ಡಾನ್ ಆಫ್ ರಾಮಾಯಣ’ ಟ್ರೇಲರ್ ಅನ್ನು ಬ್ರಹ್ಮ ಮುಹೂರ್ತದಲ್ಲಿ ವಿಶ್ವದಾದ್ಯಂತ ಅನಾವರಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಪವಿತ್ರ ಹಾಗೂ ಆಧ್ಯಾತ್ಮಿಕ ಸಮಯವೆಂದು ಪರಿಗಣಿಸುವ ಹಿನ್ನೆಲೆಯಲ್ಲಿ ಇದೇ ವೇಳೆಯನ್ನು ಟ್ರೇಲರ್ ಬಿಡುಗಡೆಗೆ ಆಯ್ಕೆ ಮಾಡಲಾಗಿದೆ.

ಎಲ್ಲವೂ ಯೋಜನೆಯಂತೆ ನಡೆದಿದ್ದರೆ ಟ್ರೇಲರ್ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರದ ವ್ಯಾಪಾರ ಮತ್ತು ಬಿಡುಗಡೆ ತಂತ್ರಕ್ಕೆ ಸಂಬಂಧಿಸಿದ ಕೆಲವು ಬದಲಾವಣೆಗಳ ಹಿನ್ನೆಲೆಯಲ್ಲಿ ಟ್ರೇಲರ್ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ನಿರ್ಮಾಪಕರೇ ಹೊಸ ಪೋಸ್ಟರ್ ಮೂಲಕ ಅಧಿಕೃತ ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿದ್ದಾರೆ.

ಚಿತ್ರತಂಡ ಬಿಡುಗಡೆ ಮಾಡಿರುವ ಪೋಸ್ಟರ್‌ನಲ್ಲಿ ಯಾವುದೇ ಹೊಸ ದೃಶ್ಯಾವಳಿಗಳನ್ನು ಬಹಿರಂಗಪಡಿಸಿಲ್ಲ. ಆದರೂ, ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿರುವುದು ಅಭಿಮಾನಿಗಳಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಕಳೆದ ಹಲವು ತಿಂಗಳುಗಳಿಂದ ಚಿತ್ರದ ಮೊದಲ ಝಲಕ್‌ಗಾಗಿ ಕಾಯುತ್ತಿದ್ದ ಸಿನಿಪ್ರಿಯರು ಈಗ ಟ್ರೇಲರ್ ಬಿಡುಗಡೆಗಾಗಿ ಕಾತರದಿಂದ ಎದುರು ನೋಡುತ್ತಿದ್ದಾರೆ.

ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಯಶ್ ಅಭಿನಯಿಸಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ.

Author

ANU News

Follow Me
Other Articles
Previous

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ; ಸಿಎಂಗೆ ಶಾಸಕರಿಂದ ಮನವರಿಕೆ

Next

Curiosity builds as ‘Ramayana’ trailer release date is announced

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ
    • Probe sought into alleged lapses, poor quality in Jal Jeevan Mission works
    • Kannada school reopens in Qatar with renewed focus on language, culture
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ
    • Mekedatu project is only permanent solution to Cauvery dispute, says K’taka minister
    Copyright 2026 — ANU News. All rights reserved. Blogsy WordPress Theme