Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಧಾರ್ಮಿಕ

‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

By ANU News
August 2, 2026 1 Min Read
0

ಬೆಂಗಳೂರು: ರಾಜ್ಯದ ‘ಎ’ ಹಾಗೂ ‘ಬಿ’ ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸುವಂತೆ ಕಂದಾಯ ಹಾಗೂ ಮುಜರಾಯಿ ಸಚಿವ ಡಾ.ಜಿ. ಪರಮೇಶ್ವರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ದೇವಸ್ಥಾನಗಳ ಅಭಿವೃದ್ಧಿ, ಆಸ್ತಿ ಸಂರಕ್ಷಣೆ ಹಾಗೂ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ಅವರು ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ದೇವಸ್ಥಾನಗಳಲ್ಲಿ ಸಾಕಷ್ಟು ನಿಧಿ ಲಭ್ಯವಿದ್ದು, ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಶಾಶ್ವತ ಆಸ್ತಿಯಾಗಿ ಉಳಿಯುವಂತೆ ದೇವಸ್ಥಾನದ ಹೆಸರಿಗೆ ಭೂಮಿ ಖರೀದಿಸಬೇಕು ಎಂದು ಸಚಿವರು ಸೂಚಿಸಿದರು. ಇದರಿಂದ ಭವಿಷ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುಕೂಲವಾಗಲಿದೆ ಎಂದರು.

ಹುಂಡಿ ಹಣದ ದುರುಪಯೋಗ ತಡೆಗಟ್ಟಲು ಎಲ್ಲಾ ದೇವಸ್ಥಾನಗಳ ಹುಂಡಿಗಳ ಮೇಲೆ ಸಿಸಿಟಿವಿ ಅಳವಡಿಸುವಂತೆ ಮುಖ್ಯಮಂತ್ರಿ ಈಗಾಗಲೇ ಸೂಚನೆ ನೀಡಿದ್ದು, ಈ ಕಾರ್ಯವನ್ನು ಆಗಸ್ಟ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ರಾಜ್ಯದ ಹಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಮೂಲಸೌಕರ್ಯಗಳ ಕೊರತೆ ಕಂಡುಬರುತ್ತಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಯಾವುದೇ ಹಣದ ಕೊರತೆಯಿಲ್ಲ. ಪ್ರತಿಯೊಂದು ಪ್ರಮುಖ ದೇವಸ್ಥಾನಕ್ಕೂ ಮಾಸ್ಟರ್ ಪ್ಲಾನ್ ರೂಪಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

‘ಸಿ’ ವರ್ಗದ ದೇವಸ್ಥಾನಗಳನ್ನು ಅಭಿವೃದ್ಧಿ ಹೆಸರಿನಲ್ಲಿ ಖಾಸಗಿ ಸಂಸ್ಥೆಗಳಿಗೆ ದತ್ತು ನೀಡಬಾರದು. ಇಂತಹ ಕ್ರಮಗಳಿಂದ ಮುಂದಿನ ದಿನಗಳಲ್ಲಿ ದೇವಸ್ಥಾನದ ಆಸ್ತಿಯ ಮೇಲೆ ಹಕ್ಕು ವಿವಾದಗಳು ಉದ್ಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ಸಚಿವರು, ‘ಎ’ ವರ್ಗದ ದೇವಸ್ಥಾನಗಳ ಅನುದಾನದಲ್ಲಿ ಶೇ.10ರಷ್ಟು ಹಣವನ್ನು ‘ಸಿ’ ವರ್ಗದ ದೇವಸ್ಥಾನಗಳ ಅಭಿವೃದ್ಧಿಗೆ ಬಳಸುವಂತೆ ಸೂಚಿಸಿದರು.

ದೇವಸ್ಥಾನಗಳ ಒತ್ತುವರಿಯಾದ ಭೂಮಿಯನ್ನು ತೆರವುಗೊಳಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ಮೂರು ತಿಂಗಳೊಳಗೆ ಸರ್ವೇ ಪೂರ್ಣಗೊಳಿಸಿ ಒತ್ತುವರಿ ತೆರವುಗೊಳಿಸಿ ಮುಜರಾಯಿ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ, ಅಧಿಸೂಚಿತ ದೇವಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಶೀಘ್ರದಲ್ಲೇ ಅರ್ಜಿ ಆಹ್ವಾನಿಸುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು

Author

ANU News

Follow Me
Other Articles
Previous

Cauvery dispute deepens as Tamil Nadu opts for SC, Karnataka defers talks

Next

ಕಾವೇರಿ ವಿವಾದ; ಸುಪ್ರೀಂ ಮೊರೆ ಹೋದ ತಮಿಳುನಾಡು; ಉಭಯ ರಾಜ್ಯಗಳ ಸಿಎಂ ಸಭೆ ಮುಂದೂಡಿಕೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ನವೆಂಬರ್ ಅಂತ್ಯಕ್ಕೆ ಬಯಲುಸೀಮೆಯ ಕೆರೆಗಳಿಗೆ ಭದ್ರಾ ನೀರು: ಸಚಿವ ಚಲುವರಾಯಸ್ವಾಮಿ
    • Mumbai Ganeshotsav: Electrical leak near pandal kills 2, leaves 4 injured
    • ಮುಂಬೈ ಗಣೇಶೋತ್ಸವದಲ್ಲಿ ವಿದ್ಯುತ್ ಅವಘಡ: ಬಾಲಕಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ
    • Indian Railways clears ₹142cr traction upgrade for Savalyapuram-Guntur section
    • ₹37.5cr irrigation projects hit by maintenance lapses, CT Ravi directs officials to restore water supply
    Copyright 2026 — ANU News. All rights reserved. Blogsy WordPress Theme