Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ

By ANU News
August 2, 2026 1 Min Read
0

ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಮತ್ತು ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನೇತ್ರಾವತಿ ನದಿಯ ನೀರಿನ ಹರಿವು ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ.

ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ. ತ್ರಿವೇಣಿ ಸಂಗಮ, ಸ್ನಾನಘಟ್ಟಗಳು ಹಾಗೂ ಉದ್ಯಾನವನಗಳು ನೀರಿನಲ್ಲಿ ಮುಳುಗಿದ್ದು, ಭಾಗಮಂಡಲ–ತಲಕಾವೇರಿ ರಸ್ತೆ ಸಹ ಜಲಾವೃತಗೊಂಡಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರು ಫ್ಲೈಓವರ್ ಮೂಲಕ ಸಂಚರಿಸುತ್ತಿದ್ದಾರೆ.

ಇತ್ತ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕಬಿನಿಯಿಂದ ನೀರು ಬಿಡುಗಡೆ ಪ್ರಮಾಣವನ್ನು 25 ಸಾವಿರ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ. ಈ ಹಿಂದೆ 10ರಿಂದ 12 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿತ್ತು. ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದ್ದು, ಕಬಿನಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ನದಿ ತೀರದ ಗ್ರಾಮಗಳ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಮುಂದಿನ ದಿನಗಳಲ್ಲೂ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಲಾಶಯಗಳ ಒಳಹರಿವು ಮತ್ತಷ್ಟು ಹೆಚ್ಚುವ ಆತಂಕ ವ್ಯಕ್ತವಾಗಿದ್ದು, ಪರಿಸ್ಥಿತಿಯ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ.

Author

ANU News

Follow Me
Other Articles
Previous

Veerkesari Belthangady marks 10 years with 210 successful service projects

Next

Heavy rains lash Karnataka; Kabini discharge increased as reservoir inflows rise

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Heavy rains lash Karnataka; Kabini discharge increased as reservoir inflows rise
    • ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ
    • Veerkesari Belthangady marks 10 years with 210 successful service projects
    • ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ
    • ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ; ಇವರೇ ಸಂಭಾವ್ಯ ಸಚಿವರು?
    Copyright 2026 — ANU News. All rights reserved. Blogsy WordPress Theme