Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್

By ANU News
August 4, 2026 1 Min Read
0

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕಾರಣ ಆಗಸ್ಟ್ ಅಂತ್ಯದವರೆಗೆ ಬರ ಘೋಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ನಿಯಮಗಳನ್ನು ಸಡಿಲಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ಮೂರು ಪ್ರಮುಖ ಜಲಾಶಯಗಳಲ್ಲಿ ಶೇ.90ರಷ್ಟು ನೀರು ಸಂಗ್ರಹವಾಗಿದ್ದು, ಕೆಆರ್‌ಎಸ್‌ ಜಲಾಶಯವೂ ಮುಂದಿನ ಎರಡು-ಮೂರು ದಿನಗಳಲ್ಲಿ ಇದೇ ಮಟ್ಟ ತಲುಪುವ ಸಾಧ್ಯತೆ ಇದೆ ಎಂದು ಹೇಳಿದರು.

ಇನ್ನೊಂದೆಡೆ, ಉತ್ತರ ಕರ್ನಾಟಕದ 111 ತಾಲ್ಲೂಕುಗಳಲ್ಲಿ ಕಳೆದ ನಾಲ್ಕು ವಾರಗಳಿಂದ ಒಣಹವೆ ಮುಂದುವರಿದಿದ್ದು, ಮಳೆ ಕೊರತೆಯಿಂದ ಬರದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ಮತ್ತು ಶಾಸಕರು ಬರ ಘೋಷಣೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂದರು.

ಆದರೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ 10 ಮಾನದಂಡಗಳ ಪ್ರಕಾರ ಆಗಸ್ಟ್ ತಿಂಗಳ ಅಂತ್ಯದವರೆಗೆ ಬರ ಘೋಷಣೆ ಮಾಡಲು ಅವಕಾಶವಿಲ್ಲ. ಹೀಗಾಗಿ ಆ ನಿಯಮಗಳನ್ನು ಸಡಿಲಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ವಿವಿಧ ಪ್ರದೇಶಗಳಲ್ಲಿನ ಬರ ಪರಿಸ್ಥಿತಿಯನ್ನು ರೆಡ್ ಝೋನ್ ಹಾಗೂ ಯೆಲ್ಲೋ ಝೋನ್ ಆಧಾರದ ಮೇಲೆ ಪರಿಶೀಲಿಸಿ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದರು.

ಇದೇ ವೇಳೆ, ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬಳಿಕ ಹೊಸ ಸಚಿವರಿಗೆ ಅವರ ಜವಾಬ್ದಾರಿಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿವರವಾಗಿ ಮಾರ್ಗದರ್ಶನ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Author

ANU News

Follow Me
Other Articles
Previous

ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸ್ಪೀಕರ್ ಹುದ್ದೆ ಉಲ್ಲೇಖ; ಸಿ.ಟಿ. ರವಿ ಆಕ್ಷೇಪ

Next

Drought can’t be declared under current rules, Karnataka tells Centre, seeks relaxation

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Cabinet rewards corruption’: B.Y. Vijayendra targets Shivakumar govt over ministerial picks
    • ಭ್ರಷ್ಟರಿಗೆ, ಪಬ್ ಗಳಲ್ಲಿ ಗಲಾಟೆ ಮಾಡಿದವರಿಗೆ ಮಂತ್ರಿಸ್ಥಾನ; ವಿಜಯೇಂದ್ರ ಟೀಕೆ
    • Drought can’t be declared under current rules, Karnataka tells Centre, seeks relaxation
    • ಬರ ಘೋಷಣೆಗೆ ಕೇಂದ್ರದ ನಿಯಮ ಅಡ್ಡಿ; ಸಡಿಲಿಕೆಗೆ ಪತ್ರ ಬರೆದಿದ್ದೇವೆ: ಡಾ.ಜಿ. ಪರಮೇಶ್ವರ್
    • ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸ್ಪೀಕರ್ ಹುದ್ದೆ ಉಲ್ಲೇಖ; ಸಿ.ಟಿ. ರವಿ ಆಕ್ಷೇಪ
    Copyright 2026 — ANU News. All rights reserved. Blogsy WordPress Theme