Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ

By ANU News
August 5, 2026 1 Min Read
0

ಬೆಂಗಳೂರು/ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ ನಾಯಕರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರಾಜೀನಾಮೆಗಳ ಸರಣಿಯೂ ಆರಂಭವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಬುಧವಾರ ಬಂದ್‌ಗೆ ಕರೆ ನೀಡಲಾಗಿದೆ. ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬಾಗೇಪಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಬಂದ್‌ಗೆ ಸುಬ್ಬಾರೆಡ್ಡಿ ಅವರ ನೇರ ಬೆಂಬಲವಿಲ್ಲ, ಸಾರ್ವಜನಿಕರ ಅಸಮಾಧಾನದಿಂದಲೇ ಪ್ರತಿಭಟನೆ ನಡೆಯುತ್ತಿದೆ ಎಂದು ಬೆಂಬಲಿಗರು ತಿಳಿಸಿದ್ದಾರೆ.

ಇತ್ತ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. “ರಾಜಕೀಯದಲ್ಲಿ ನಮ್ಮಂಥ ಸಾಮಾನ್ಯ ರೈತರ ಮಗನಿಗೆ ಮೇಲಕ್ಕೆ ಬರೋದು ಕಷ್ಟ. ನಮಗೆ ಗಾಡ್‌ಫಾದರ್ ಇರಲಿಲ್ಲ, ಅದಕ್ಕೇ ಸಚಿವ ಸ್ಥಾನ ತಪ್ಪಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮತ್ತೊಂದೆಡೆ, ಕೊಪ್ಪಳದಲ್ಲೂ ಅಸಮಾಧಾನ ಭುಗಿಲೆದ್ದಿದೆ. ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಹಲವು ದಶಕಗಳಿಂದ ಜಿಲ್ಲೆಯು ಸಚಿವ ಸ್ಥಾನದಿಂದ ವಂಚಿತವಾಗಿದೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಅಲೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಬೆಳವಣಿಗೆಗಳು ನಡೆಯುವ ಸಾಧ್ಯತೆಗಳಿವೆ.

Author

ANU News

Follow Me
Other Articles
Previous

Pradeep Rawat’s death leaves Indian cinema in mourning

Next

Congress dissent deepens after cabinet rejig; protests, bandh and resignations rock Karnataka

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • MSMEಗಳಿಗೆ ಹಣಕಾಸು ಬಲ; SIDBIಯಿಂದ 71 ಹೊಸ ಶಾಖೆಗಳು, ECLGS 5.0 ಜಾರಿ: ಕೇಂದ್ರ
    • Govt strengthens MSME financing: SIDBI opens 71 branches, launches expanded credit schemes
    • 2014ರಿಂದ 12,819 ಲಕ್ಷ ಮೆಟ್ರಿಕ್ ಟನ್ MSP ಬೆಳೆ ಖರೀದಿ; ರೈತರಿಗೆ ₹27.8 ಲಕ್ಷ ಕೋಟಿ ಪಾವತಿ: ಕೇಂದ್ರ
    • Govt procured 12,819 LMT of MSP crops since 2014; payouts touch ₹27.8 lakh crore
    • ರಾಷ್ಟ್ರೀಯ ಆಯುಷ್ ಮಿಷನ್ ಅಡಿ ಹೊಸ ಆಯುಷ್ ಕಾಲೇಜು, ಆಸ್ಪತ್ರೆಗಳಿಗೆ ರಾಜ್ಯಗಳಿಗೆ ಕೇಂದ್ರದಿಂದ ಆರ್ಥಿಕ ನೆರವು
    Copyright 2026 — ANU News. All rights reserved. Blogsy WordPress Theme