Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಸಚಿವರಾದ ನಂತರ ಮೊದಲ ಭೇಟಿ; ಮಂಡ್ಯದಲ್ಲಿ ಚಲುವರಾಯಸ್ವಾಮಿ, ನರೇಂದ್ರಸ್ವಾಮಿಗೆ ಅದ್ಧೂರಿ ಸ್ವಾಗತ

By ANU News
August 8, 2026 1 Min Read
0

ಮಂಡ್ಯ: ನೂತನ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಶನಿವಾರ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯ ಗಡಿ ನಿಡಘಟ್ಟದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅದ್ದೂರಿಯಾಗಿ ಸ್ವಾಗತಿಸಿದರು.

ಮದ್ದೂರು ತಾಲೂಕಿನ ನಿಡಘಟ್ಟ ಬಳಿ ಸಚಿವರಿಬ್ಬರನ್ನು ಮದ್ದೂರು ಶಾಸಕ ಕೆ. ಉದಯ್, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.

ಈ ವೇಳೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನೂತನ ಸಚಿವರಿಗೆ ಶುಭಾಶಯ ಕೋರಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಮಂಡ್ಯ ಜಿಲ್ಲೆಯ ಸಾರ್ವಜನಿಕರೂ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಹಿನ್ನೆಲೆಯಲ್ಲಿ ನಿಡಘಟ್ಟದಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ಉತ್ಸಾಹದ ವಾತಾವರಣ ಕಂಡುಬಂತು. ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸಾರ್ವಜನಿಕರು ಸಚಿವರ ಮೇಲೆ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

Author

ANU News

Follow Me
Other Articles
Previous

KSRTC Onam special buses: 90 additional services from Bengaluru to Kerala from August 21

Next

ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme