Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಎನ್‌ಟಿಎಯಲ್ಲಿ ಅಮೂಲಾಗ್ರ ಬದಲಾವಣೆ: 50ಕ್ಕೂ ಹೆಚ್ಚು ಸಿಬ್ಬಂದಿ ವಜಾ

By Anu News
August 17, 2026 1 Min Read
0

ನವದೆಹಲಿ: ಯುಜಿಸಿ-ನೆಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿನ ಅವ್ಯವಹಾರಗಳ ಹಿನ್ನೆಲೆಯಲ್ಲಿ ಟೀಕೆಗೆ ಗುರಿಯಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯಲ್ಲಿ ಸರ್ಕಾರ ಮಹತ್ವದ ಸುಧಾರಣಾ ಕ್ರಮಗಳಿಗೆ ಮುಂದಾಗಿದೆ.

ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಎನ್‌ಟಿಎ ಮಹಾನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆ ಕುರಿತು ಚರ್ಚಿಸಿದರು.

ಸಭೆಯಲ್ಲಿ ಎನ್‌ಟಿಎ ಕೈಗೊಂಡಿರುವ ಕ್ರಮಗಳ ಕುರಿತು ಸಚಿವರಿಗೆ ಮಾಹಿತಿ ನೀಡಲಾಯಿತು.

50ಕ್ಕೂ ಹೆಚ್ಚು ಸಿಬ್ಬಂದಿಯನ್ನು ಎನ್‌ಟಿಎಯಿಂದ ತೆಗೆದುಹಾಕಲಾಗಿದೆ ಎಂದು ತಿಳಿಸಲಾಯಿತು. ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಮುಖ್ಯ ತಂತ್ರಜ್ಞಾನ ಅಧಿಕಾರಿ, ಮುಖ್ಯ ಹಣಕಾಸು ಅಧಿಕಾರಿ, ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO), ಪರೀಕ್ಷಾ ಭದ್ರತೆ, ಸಂಶೋಧನೆ ಮತ್ತು ಸೈಕೋಮೆಟ್ರಿಕ್ಸ್ ಸೇರಿದಂತೆ 10 ಹೊಸ ವೃತ್ತಿಪರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ.

ಸೈಬರ್ ಭದ್ರತೆ, ಸೈಕೋಮೆಟ್ರಿಕ್ಸ್, ಪ್ರಶ್ನೆಪತ್ರಿಕೆ ವಿನ್ಯಾಸ ಸೇರಿದಂತೆ ವಿಶೇಷ ಕ್ಷೇತ್ರಗಳಲ್ಲಿ ಖಾಸಗಿ ವಲಯದ ತಜ್ಞರನ್ನು ನೇಮಿಸಿಕೊಳ್ಳಲಾಗುತ್ತಿದೆ.

ಪರೀಕ್ಷಾ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜೋಶಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಯ ಗೌಪ್ಯ ಕಾರ್ಯಾಚರಣೆ ವ್ಯವಸ್ಥೆ (CONOPS), ಪ್ರತ್ಯೇಕ ಕೊಠಡಿಗಳು, ಏರ್-ಗ್ಯಾಪ್ಡ್ ವ್ಯವಸ್ಥೆಗಳು ಹಾಗೂ ಎಲೆಕ್ಟ್ರಾನಿಕ್ ಸಾಧನಗಳ ಠೇವಣಿ ಸೇರಿದಂತೆ ಭದ್ರತಾ ಕ್ರಮಗಳನ್ನು ತ್ವರಿತವಾಗಿ ಸಂಪೂರ್ಣವಾಗಿ ಪರಿಷ್ಕರಿಸುವಂತೆ ನಿರ್ದೇಶನ ನೀಡಿದ್ದಾರೆ.

Education Minister Shri @JoshiPralhad held a meeting with the Secretary, Department of Higher Education, DG @NTA_Exams, and other senior officials.

The Minister was apprised on the steps taken by NTA in the wake of recent issues, particularly with reference to reforming the… pic.twitter.com/D5r5jSY0q0

— Ministry of Education (@EduMinOfIndia) August 17, 2026

ಇದಲ್ಲದೆ, ಎನ್‌ಟಿಎಯ ಎಲ್ಲಾ ಪರೀಕ್ಷಾ ಪ್ರಕ್ರಿಯೆಗಳ ಸಮಗ್ರ ಆಡಿಟ್ ನಡೆಸಿ, ಕೈಗೊಂಡಿರುವ ಸುಧಾರಣಾ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Author

Anu News

Follow Me
Other Articles
Previous

Renukaswamy case: Court rejects Darshan’s plea for physical appearance

Next

NTA set for major revamp as Centre tightens exam security

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • NTA set for major revamp as Centre tightens exam security
    • ಎನ್‌ಟಿಎಯಲ್ಲಿ ಅಮೂಲಾಗ್ರ ಬದಲಾವಣೆ: 50ಕ್ಕೂ ಹೆಚ್ಚು ಸಿಬ್ಬಂದಿ ವಜಾ
    • Renukaswamy case: Court rejects Darshan’s plea for physical appearance
    • ರೇಣುಕಾಸ್ವಾಮಿ ಪ್ರಕರಣ: ದರ್ಶನ್‌ಗೆ ಹಿನ್ನಡೆ; ಖುದ್ದು ಹಾಜರಿ ಅರ್ಜಿ ತಿರಸ್ಕಾರ
    • Food safety: Inspections to cover PGs, hostels too, says UT Khader
    Copyright 2026 — ANU News. All rights reserved. Blogsy WordPress Theme