Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

By Anu News
August 25, 2026 1 Min Read
0

ಚಿತ್ರದುರ್ಗ: ದಾವಣಗೆರೆ ಕಾಂಗ್ರೆಸ್ ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು  ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್‌ ಬಳಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಶಾಸಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಸಮರ್ಥ್ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ವೇಳೆ, ಸಂಡೂರು ಮೂಲದ ಸಂದೀಪ್ (45) ಎಂಬುವವರು ಚಲಾಯಿಸುತ್ತಿದ್ದ ಇನೋವಾ ಕಾರು ಕೆ.ಆರ್. ಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಶಾಸಕ ಸಮರ್ಥ್ ಅವರ ಕಾರು ಪಲ್ಟಿಯಾದ ಕಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಸಂದೀಪ್ ಗಾಯಗೊಂಡಿದ್ದು, ಅವರನ್ನು ತಕ್ಷಣ ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಶಾಸಕ ಸಮರ್ಥ್ ಶಾಮನೂರು ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಬಳಿಕ ಅವರು ಮತ್ತೊಂದು ಕಾರಿನಲ್ಲಿ ದಾವಣಗೆರೆಗೆ ಪ್ರಯಾಣ ಮುಂದುವರಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author

Anu News

Follow Me
Other Articles
Previous

KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

Next

Car accident near Hiriyur: Davangere MLA Samarth Shamanur escapes unhurt

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Delhi Drops Jantar Mantar as Protest Site, Names Three Alternative Venues
    • ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಬ್ರೇಕ್‌! ದೆಹಲಿಯಲ್ಲಿ 3 ಹೊಸ ಸ್ಥಳ ಗುರುತು
    • ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಕೇರಳ ವಿಧಾನಸಭೆ ನಿರ್ಣಯ
    • Kerala Assembly Passes Resolution Seeking Removal of CEC Gyanesh Kumar Over SIR Irregularities
    • Karnataka Congress Leaders Join INDIA Bloc Protest Against SIR, Demand CEC’s Resignation
    Copyright 2026 — ANU News. All rights reserved. Blogsy WordPress Theme