Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

By Anu News
August 25, 2026 1 Min Read
0

ಮಂಗಳೂರು: ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಒಂದು ದಿನ ಬಾಕಿ ಇರುವಂತೆ ನಟ ಯಶ್ ಕರಾವಳಿಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆಗಸ್ಟ್ 25ರಂದು ನಿರ್ಮಾಪಕ ವೆಂಕಟ್ ಅವರೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿದ ಯಶ್, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ನಂತರ ಯಶ್ ಹಾಗೂ ವೆಂಕಟ್ ಉಜಿರೆಯ ಸುರಿಯದಲ್ಲಿರುವ ಸದಾಶಿವರುದ್ರ ದೇವಾಲಯಕ್ಕೂ ಭೇಟಿ ನೀಡಿದರು. ‘ಕೆಜಿಎಫ್ 2’ ಬಿಡುಗಡೆ ಸಂದರ್ಭದಲ್ಲೂ ಯಶ್ ಈ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. 2024ರಲ್ಲೂ ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ಹರಕೆ ಸಲ್ಲಿಸಿದ್ದರು.

ಸಿನಿಮಾ ಬಿಡುಗಡೆಗೂ ಮುನ್ನ ದೇವಾಲಯಗಳಿಗೆ ಭೇಟಿ ನೀಡುವುದು ಯಶ್ ಪಾಲಿಸಿಕೊಂಡು ಬಂದಿರುವ ಸಂಪ್ರದಾಯವಾಗಿದೆ. ಇದೀಗ ‘ಟಾಕ್ಸಿಕ್’ ಬಿಡುಗಡೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಟೆಂಪಲ್ ರನ್ ಮಾಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ.

ಯಶ್ ಅಭಿನಯದ ‘ಟಾಕ್ಸಿಕ್’ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಗೀತೂ ಮೋಹನ್‌ದಾಸ್ ನಿರ್ದೇಶನದ ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಜತೆಗೆ ಸಹ ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. KVN ಪ್ರೊಡಕ್ಷನ್ಸ್ ಜೊತೆಗೂಡಿ ತಮ್ಮ ‘ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್’ ಮೂಲಕ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Author

Anu News

Follow Me
Other Articles
Previous

Karnataka plans cloud seeding to tackle rain deficit; ₹27 crore project

Next

Ahead of ‘Toxic’ release, Yash offers prayers at Dharmasthala, Ujire

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Ahead of ‘Toxic’ release, Yash offers prayers at Dharmasthala, Ujire
    • ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ
    • Karnataka plans cloud seeding to tackle rain deficit; ₹27 crore project
    • ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ
    • Darshan case: Accused No. 14 Pradosh turns approver, court allows plea
    Copyright 2026 — ANU News. All rights reserved. Blogsy WordPress Theme