Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶ

ಗಂಗಾ ನದಿಯಲ್ಲಿ ದೋಣಿ ದುರಂತ; ನಾಪತ್ತೆಯಾದವರಿಗಾಗಿ ಹುಡುಕಾಟ

By ANU News
August 27, 2026 1 Min Read
0

ಪಾಟ್ನಾ: ಬಿಹಾರದ ಗಂಗಾ ನದಿಯಲ್ಲಿ 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ನಿಯಂತ್ರಣ ತಪ್ಪಿ ಮಗುಚಿದ ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ.

ನದಿಯ ಮಧ್ಯಭಾಗದಲ್ಲಿ ದೋಣಿ ಮಗುಚಿದ್ದು, ಪ್ರತ್ಯಕ್ಷದರ್ಶಿಗಳು, ಸ್ಥಳೀಯ ಮೀನುಗಾರರು ಹಾಗೂ ಗ್ರಾಮಸ್ಥರ ನೆರವಿನಿಂದ 19 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಇಬ್ಬರು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬಳಿಕ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿ, 19 ಮಂದಿಯನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ನಾಪತ್ತೆಯಾದ ಇಬ್ಬರಿಗಾಗಿ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ.

ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಹಾಗೂ ದೋಣಿಯ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Author

ANU News

Follow Me
Other Articles
Previous

‘Toxic’ a Box Office Blast; ₹140 Crore Worldwide on Day One

Next

Boat Capsizes in Ganga in Bihar; Search Underway for Two Missing

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Sadguru Madhusudan Sai Calls for Spiritual, Value-Based Education at Navaratri Festival
    • ಮುದ್ದೇನಹಳ್ಳಿಯ ಸತ್ಯ ಸಾಯಿ ನವರಾತ್ರಿ ಉತ್ಸವದಲ್ಲಿ ಮೇಧಾ ದಕ್ಷಿಣಾಮೂರ್ತಿ ಯಾಗ, ಸರಸ್ವತಿ ಪೂಜೆ
    • Muddenahalli Navaratri celebrations; Bridge Economic, Educational Inequalities, Dr. Mohan Alva Urges
    • ಮುದ್ದೇನಹಳ್ಳಿ ಸತ್ಯ ಸಾಯಿ ಗ್ರಾಮದಲ್ಲಿ ನವರಾತ್ರಿ ವೈಭವ; ಆರ್ಥಿಕ, ಶೈಕ್ಷಣಿಕ ಅಸಮಾನತೆ ನಿವಾರಣೆಗೆ ಡಾ. ಮೋಹನ್ ಆಳ್ವ ಕರೆ
    • INDIA Alliance Plans Karnataka-wide Protest to ‘Save the Vote, Save the Nation’
    Copyright 2026 — ANU News. All rights reserved. Blogsy WordPress Theme