Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ: ರಾಜ್ಯ ಪರಿಷತ್‌ಗೆ ಶಿಫಾರಸಿಗೆ ನಿರ್ಧಾರ

By ANU News
September 8, 2026 1 Min Read
0

ಬೆಂಗಳೂರು: ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಅನುದಾನ ಹಂಚಿಕೆ ಹಾಗೂ ಬಳಕೆಗೆ ಸಂಬಂಧಿಸಿದಂತೆ ಕೆಲವು ಮಹತ್ವದ ಶಿಫಾರಸುಗಳನ್ನು ರಾಜ್ಯ ಪರಿಷತ್‌ಗೆ ಕಳುಹಿಸಲು ನಿರ್ಧರಿಸಲಾಗಿದೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೋಡಲ್ ಏಜೆನ್ಸಿ ಉಪಾಧ್ಯಕ್ಷ ಟಿ.ರಘುಮೂರ್ತಿ ಅವರ ನೇತೃತ್ವದಲ್ಲಿ ಸತತ ಎರಡನೇ ದಿನ ನಡೆದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

2026-27ನೇ ಸಾಲಿನಲ್ಲಿ ವಿವಿಧ ಇಲಾಖೆಗಳು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ನಿಗದಿಪಡಿಸಲಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳದಿರುವ ಕುರಿತು ಸಚಿವತ್ರಯರು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಂದ ಸಮಗ್ರ ಮಾಹಿತಿ ಪಡೆದು, ಅನುದಾನ ಬಳಕೆ ಹಾಗೂ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳ ಕುರಿತು ಸೂಕ್ತ ಶಿಫಾರಸುಗಳನ್ನು ರಾಜ್ಯ ಪರಿಷತ್‌ಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

Author

ANU News

Follow Me
Other Articles
Previous

Sanju Samson announces scholarships for 1,000 students aspiring to crack UPSC

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ: ರಾಜ್ಯ ಪರಿಷತ್‌ಗೆ ಶಿಫಾರಸಿಗೆ ನಿರ್ಧಾರ
    • Sanju Samson announces scholarships for 1,000 students aspiring to crack UPSC
    • ಯುವಕರಿಗೆ ಸಂಜು ಸ್ಯಾಮ್ಸನ್ ಸಿಹಿಸುದ್ದಿ: 1,000 ವಿದ್ಯಾರ್ಥಿಗಳಿಗೆ UPSC ಸ್ಕಾಲರ್‌ಶಿಪ್
    • How did phone reach Prajwal Revanna in jail? Court allows 2-day police custody
    • ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣಗೆ 2 ದಿನ ಪೊಲೀಸ್ ಕಸ್ಟಡಿ
    Copyright 2026 — ANU News. All rights reserved. Blogsy WordPress Theme