Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

‘ಪೊಲೀಸ್ ಠಾಣೆಗೆ ನುಗ್ಗಿದವರನ್ನು ಜೈಲಿಗೆ ಸೇರಿಸುತ್ತೇವೆ’: ಬಿಜೆಪಿ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

By ANU News
September 13, 2026 1 Min Read
0

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ನೀಡಿರುವ ಎನ್ನಲಾದ ಎಚ್ಚರಿಕೆಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಮಸೀದಿ ಮುಂಭಾಗದಲ್ಲಿ ಗಣೇಶ ಮೆರವಣಿಗೆ ನಡೆಸುವುದು, ಪಟಾಕಿ ಸಿಡಿಸುವುದು ಹಾಗೂ ಡಿಜೆ ಮಾದರಿಯ ಧ್ವನಿವರ್ಧಕ ಬಳಕೆ ಕುರಿತು ಇನ್‌ಸ್ಪೆಕ್ಟರ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಮೆರವಣಿಗೆ ನಡೆಸುವ ಮಾರ್ಗವನ್ನು ಮುಂಚಿತವಾಗಿ ತಿಳಿಸಬೇಕು ಹಾಗೂ ನಿಗದಿತ ಮಾರ್ಗದಲ್ಲೇ ಮೆರವಣಿಗೆ ನಡೆಸಬೇಕು ಎಂದು ಅವರು ಸೂಚಿಸಿರುವುದು ವಿಡಿಯೊದಲ್ಲಿ ಕಂಡುಬರುತ್ತದೆ ಎಂದು ವರದಿಯಾಗಿದೆ.

ಮಸೀದಿ ಪ್ರದೇಶದಲ್ಲಿ ಭದ್ರತೆ ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದಂತೆ ನಿಯಮಗಳನ್ನು ಪಾಲಿಸಬೇಕು ಎಂದು ಇನ್‌ಸ್ಪೆಕ್ಟರ್ ಹೇಳಿರುವುದಾಗಿ ತಿಳಿದುಬಂದಿದೆ. ಆದರೆ, ಅವರ ಮಾತಿನ ಶೈಲಿ ಹಿಂದೂ ಯುವಕರನ್ನು ಬೆದರಿಸುವಂತಿದೆ ಎಂಬ ಆರೋಪವೂ ಕೇಳಿಬಂದಿದೆ.

ವಿಡಿಯೊ ವೈರಲ್ ಬಳಿಕ ಮಾಜಿ ಸಂಸದ ಪ್ರತಾಪ್ ಸಿಂಹ ಇನ್‌ಸ್ಪೆಕ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಸಲ ಆ ರೀತಿ ಮಾತನಾಡಿದ್ರೆ ಠಾಣೆಗೆ ನುಗ್ಗುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಸವಾಲು ಹಾಕಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದಿದ್ದಾರೆ.

ಮೈಸೂರಿನ ಕಡೆಯ “ಪೇಟೆ ರೌಡಿ”ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ. “ಪೊಲೀಸ್ ಠಾಣೆಗೆ ನುಗ್ಗುತ್ತೇನೆ” ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಸಾಮಾಜಿಕ ಮಾಧ್ಯಮ X ನಲ್ಲಿ ಪೋಸ್ಟ್ ಹಾಕಿ ಎಚ್ಚರಿಕೆ ನೀಡಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಸನ್ನದ್ದವಾಗಿದೆ ಗೃಹ ಇಲಾಖೆ, ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Author

ANU News

Follow Me
Other Articles
Previous

ಗಣೇಶ ಮೆರವಣಿಗೆ: ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಕಾನೂನು ರೀತ್ಯ ಉತ್ತರ ಕೊಡುತ್ತೇನೆ: ಯತ್ನಾಳ್

Next

‘Storm police station and go to jail’: Priyank Kharge warns BJP leaders amid Ganesh procession row

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PNG ಸಂಪರ್ಕ ವಿಸ್ತರಣೆಗೆ ಹೊಸ ಪ್ರೋತ್ಸಾಹ ಯೋಜನೆ
    • New PNG incentive scheme aims to make piped cooking gas cheaper, expand household connections
    • ಜಾಗತಿಕ ಲಸಿಕೆ ನಾಯಕನಾಗಿ ಭಾರತ: 100ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ಪೂರೈಕೆ
    • India emerges as global vaccine leader, can drive next-gen health security: Jitendra Singh
    • India must own entire lab-grown diamond value chain, says Amit Shah
    Copyright 2026 — ANU News. All rights reserved. Blogsy WordPress Theme