Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಧಾರ್ಮಿಕಪ್ರಾದೇಶಿಕ

ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

By ANU News
September 15, 2026 1 Min Read
0

ಮಂಡ್ಯ: ಮೈಸೂರು ದಸರಾಕ್ಕಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಆಚರಿಸುವ ಬದಲು ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶ್ರೀರಂಗಪಟ್ಟಣ ದಸರಾ ಆಚರಣೆ ಕುರಿತು ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಈ ಬಾರಿ ಉತ್ಸವಕ್ಕೆ ವಿಶೇಷ ರೂಪ ನೀಡಲಾಗುವುದು ಎಂದರು.

ಅಕ್ಟೋಬರ್ 12 ಮತ್ತು 13ರಂದು ಯುವ ಸಂಭ್ರಮ ಹಾಗೂ ಅಕ್ಟೋಬರ್ 15ರಿಂದ 18ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಯುವ ಸಂಭ್ರಮದಲ್ಲಿ ಸ್ಥಳೀಯ ಮಕ್ಕಳ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ, ಅವರನ್ನು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.

ದಸರಾ ಆಚರಣೆಗೆ ₹5 ಕೋಟಿ ಅನುದಾನ ಕೋರಿ ಸಮಿತಿ ಮನವಿ ಸಲ್ಲಿಸಿದೆ. ಶಾಸಕರ ಸಲಹೆಗಳನ್ನು ಪರಿಗಣಿಸಿ ಮುಂದಿನ ಮೂರು ದಿನಗಳಲ್ಲಿ ದಸರಾ ಉದ್ಘಾಟಕರ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ನಾಡಿನ ಸಮಸ್ತ ಎಂಜಿನಿಯರ್‌ಗಳಿಗೆ ದಿನಾಚರಣೆಯ ಶುಭಾಶಯ ಕೋರಿದ ಸಚಿವರು, ಜಿಲ್ಲೆಯ ಅಭಿವೃದ್ಧಿ ಹಾಗೂ ಪ್ರಸ್ತುತ ವಿದ್ಯಮಾನಗಳ ಬಗ್ಗೆಯೂ ಸಭೆಯಲ್ಲಿ ಮಾಹಿತಿ ಹಂಚಿಕೊಂಡರು.

Author

ANU News

Follow Me
Other Articles
Previous

ಮಿಮ್ಸ್ ಒತ್ತುವರಿ ತೆರವಿಗೆ ಸಚಿವ ಚಲುವರಾಯಸ್ವಾಮಿ ಗಡುವು

Next

Srirangapatna Dasara to be low-key this year amid drought

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ
    • Probe sought into alleged lapses, poor quality in Jal Jeevan Mission works
    • Kannada school reopens in Qatar with renewed focus on language, culture
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ
    • Mekedatu project is only permanent solution to Cauvery dispute, says K’taka minister
    Copyright 2026 — ANU News. All rights reserved. Blogsy WordPress Theme