Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

By ANU News
May 17, 2026 2 Min Read
0

ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು.

ಮುಂಬರುವ ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ, ಎಂದು ಸಚಿವರು ಹೇಳಿದರು. ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯುವ ‘ಮಹಾ ಪೋಷಕ-ಶಿಕ್ಷಕರ ಸಭೆ’ (Mega PTM) ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ಸಚಿವರು ಪ್ರಕಟಿಸಿದರು.

ಇದೇ ಶಾಲಾ ಪ್ರಾರಂಭೋತ್ಸವದ ಶುಭ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ (KPS) ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ .ಹಾಗೆಯೇ, ರಾಜ್ಯಮಟ್ಟದಲ್ಲಿ ಶಿವಮೊಗ್ಗದಿಂದ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.

ಕೆಪಿಎಸ್ ಶಾಲೆಗಳ ಉದ್ದೇಶ, ಗುಣಮಟ್ಟ ಮತ್ತು ಅಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಹಾಗೂ ಪೋಷಕರಿಗೆ ಸ್ಪಷ್ಟ ಮಾಹಿತಿ ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಆಡಳಿತಾತ್ಮಕ ಜವಾಬ್ದಾರಿಗಳ ಬಗ್ಗೆ ಸಚಿವರು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು:

ದಾಖಲಾತಿ ಅಭಿಯಾನ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಗರಿಷ್ಠ ಮಟ್ಟಕ್ಕೆ ಏರಿಸುವುದು ಮೊದಲ ಆದ್ಯತೆಯಾಗಬೇಕು. ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಗುರುತಿಸಿ, ಜಾಗೃತಿ ಮೂಡಿಸಿ ಮರಳಿ ಶಾಲೆಗೆ ತರಬೇಕು.

ಬಿಸಿಯೂಟ ಯೋಜನೆ: ಶಾಲಾ ಬಿಸಿಯೂಟ (Mid Day Meals) ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದರಲ್ಲಿ ಯಾವುದೇ ರೀತಿಯ ಲೋಪದೋಷಗಳಾಗದಂತೆ (no lapses) ಎಚ್ಚರವಹಿಸುವುದು ಕಡ್ಡಾಯ.

ಸೌಲಭ್ಯಗಳ ಸಕಾಲಿಕ ವಿತರಣೆ: ಶಾಲಾ ಪ್ರಾರಂಭದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಎಲ್ಲಾ ಅಗತ್ಯ ಸಾಮಗ್ರಿಗಳನ್ನು ಸಕಾಲದಲ್ಲಿ (In-time distribution) ವಿತರಿಸಬೇಕು.

ನಿಯಮಿತ ಮೇಲ್ವಿಚಾರಣೆ: ಡಿಡಿಪಿಐ, ಬಿಇಒ, ಸಿಆರ್‌ಪಿ ಮತ್ತು ಬಿಆರ್‌ಪಿ ಅಧಿಕಾರಿಗಳು ಕೇವಲ ಕಡತಗಳ ಪರಿಶೀಲನೆ ಮಾಡದೆ, ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಗುಣಮಟ್ಟದ ಬೋಧನೆ ಮತ್ತು ಶಿಕ್ಷಕರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಬೇಕು.

“ಎಸ್‌ಎಸ್‌ಎಲ್‌ಸಿ ಒಂದು ಅರ್ಹತಾ ಪರೀಕ್ಷೆಯಾಗಿದ್ದು, ಉನ್ನತ ಶಿಕ್ಷಣಕ್ಕೆ ಸೇತುವೆಯಂತಿದೆ. ವಿದ್ಯಾರ್ಥಿಗಳೇ ಕರ್ನಾಟಕದ ಮಾನವ ಸಂಪನ್ಮೂಲದ ಮೂಲಾಧಾರವಾಗಿದ್ದಾರೆ. ಹೀಗಾಗಿ, ಎಸ್ಎಸ್ಎಲ್ಸಿ ಫಲಿತಾಂಶದ ಸಂಪೂರ್ಣ ಸುಧಾರಣೆಗೆ ಪ್ರತಿಯೊಬ್ಬ ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಬೇಕು” ಎಂಬ ಮುಖ್ಯಮಂತ್ರಿಗಳ ಆಶಯವನ್ನು ಸಚಿವರು ಸಭೆಯಲ್ಲಿ ಪುನರುಚ್ಚರಿಸಿದರು.

Author

ANU News

Follow Me
Other Articles
Previous

ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

Next

ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Western Ghats draft: MLA Gantihole flags livelihood concerns over ESA boundaries
    • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
    • HC relief for B Nagendra; allowed to travel across India
    • ಬಿ. ನಾಗೇಂದ್ರಗೆ ಹೈಕೋರ್ಟ್‌ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
    • Southern states’ political voice must be protected, says CM DK Shivakumar
    Copyright 2026 — ANU News. All rights reserved. Blogsy WordPress Theme