Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ದೇಶಪ್ರಾದೇಶಿಕ

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

By ANU News
May 17, 2026 1 Min Read
0

ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಸಂಚಾರ ನಡೆಸಲಿರುವ ಹೊಸ ಎಕ್ಸ್‌ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆ ಈ ಹೊಸ ರೈಲು ಸೇವೆಯನ್ನು ಆರಂಭಿಸಲಾಗಿದೆ.

ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ (LTT) ನಡುವೆ ವಾರಕ್ಕೆ ಎರಡು ದಿನ ಈ ರೈಲು ಸಂಚರಿಸಲಿದೆ. ಶನಿವಾರ ಹಾಗೂ ಮಂಗಳವಾರ ಬೆಂಗಳೂರಿನಿಂದ ಮುಂಬೈಗೆ, ಭಾನುವಾರ ಮತ್ತು ಬುಧವಾರ ಮುಂಬೈನಿಂದ ಬೆಂಗಳೂರಿಗೆ ಓಡಾಟ ನಡೆಸಲಿದೆ. ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಪುಣೆ ಹಾಗೂ ಮುಂಬೈ ನಗರಗಳಿಗೆ ಈ ರೈಲು ಸಂಪರ್ಕ ಕಲ್ಪಿಸಲಿದೆ.

ರೈಲಿನಲ್ಲಿ ಒಟ್ಟು 17 ಕೋಚ್‌ಗಳಿದ್ದು, ಒಂದು ಎಸಿ 2-ಟೈರ್, ನಾಲ್ಕು ಎಸಿ 3-ಟೈರ್, ಆರು ಸ್ಲೀಪರ್ ಹಾಗೂ ನಾಲ್ಕು ಸಾಮಾನ್ಯ ದರ್ಜೆಯ ಬೋಗಿಗಳಿವೆ.

ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹಾಗೂ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ (V. Somanna) ರೈಲಿಗೆ ಹಸಿರು ನಿಶಾನೆ ತೋರಿದರು. ಅಶ್ವಿನಿ ವೈಷ್ಣವ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಂಸದರಾದ ಪಿ.ಸಿ. ಮೋಹನ್ (P.C. Mohan), ತೇಜಸ್ವಿ ಸೂರ್ಯ (Tejasvi Surya), ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ (Lehar Singh), ರೈಲ್ವೇ ಮಹಾ ವ್ಯವಸ್ಥಾಪಕ ಅನಂತ್ (Ananth) ಹಾಗೂ ವಿಭಾಗೀಯ ರೈಲ್ವೇ ವ್ಯವಸ್ಥಾಪಕ ಎ.ಕೆ. ಸಿಂಗ್ (A.K. Singh) ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸೇವೆಯಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ನೇರ ಸಂಪರ್ಕ ಹೆಚ್ಚುವುದರ ಜೊತೆಗೆ, ಪ್ರಯಾಣಿಕರಿಗೆ ಹೆಚ್ಚಿನ ಸೌಕರ್ಯ, ಕೈಗೆಟುಕುವ ದರ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದು ವಿ. ಸೋಮಣ್ಣ ಹೇಳಿದರು.

Author

ANU News

Follow Me
Other Articles
Previous

ಜನಗಣತಿ 2027: ಐದು ರಾಜ್ಯಗಳಲ್ಲಿ ಮನೆ ಪಟ್ಟಿ ಕಾರ್ಯಾಚರಣೆ ಆರಂಭ

Next

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • PM Modi urges secretaries to think beyond today, plan for India’s future
    • ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ
    • Heavy rains trigger floods in MP, West Bengal; thousands evacuated
    • ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ
    • Trump warns Iran of economic pressure; claims US controls key waterways
    Copyright 2026 — ANU News. All rights reserved. Blogsy WordPress Theme