Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

By ANU News
September 20, 2026 1 Min Read
Comments Off on ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ವಿ.ಎಚ್.ಡಿ. ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಹೋಮ್ ಸೈನ್ಸ್ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ನಿರ್ದೇಶಕಿ ಡಾ. ಮಮತಾ ಬಿ. ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.

ಈವರೆಗೆ ಪ್ರಭಾರ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಅಶೋಕ ಎಸ್.ಬಿ. ಅವರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಡಾ. ಮಮತಾ ಬಿ. ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಹೋಮ್ ಸೈನ್ಸ್‌ನ ಫ್ಯಾಮಿಲಿ ರಿಸೋರ್ಸ್ ಮ್ಯಾನೇಜ್‌ಮೆಂಟ್ ವಿಷಯದಲ್ಲಿ ಪರಿಣತಿ ಹೊಂದಿರುವ ಡಾ. ಮಮತಾ ಬಿ. ಅವರಿಗೆ 29 ವರ್ಷಗಳ ಬೋಧನಾ ಅನುಭವವಿದೆ. 25ಕ್ಕೂ ಅಧಿಕ ಸಂಶೋಧನಾ ಪ್ರಕಟಣೆಗಳನ್ನು ಹೊರತಂದಿರುವ ಅವರು, 20ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಸಂಪಾದಿತ ಪುಸ್ತಕಗಳಲ್ಲಿ ಐದು ಅಧ್ಯಾಯಗಳನ್ನು ರಚಿಸಿದ್ದು, ನಾಲ್ವರು ಸಂಶೋಧನಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ವಿಶ್ವವಿದ್ಯಾಲಯದ ಹೋಮ್ ಸೈನ್ಸ್ ಪದವಿ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಅಧ್ಯಕ್ಷೆಯಾಗಿ ಅವರು ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅಲ್ಲದೆ, ಯುಜಿಸಿ ಪ್ರಾಯೋಜಿತ ಮೈನರ್ ಸಂಶೋಧನಾ ಯೋಜನೆಯೊಂದನ್ನೂ ಪೂರ್ಣಗೊಳಿಸಿದ್ದಾರೆ.

ಬೆಂಗಳೂರು ನಗರ, ಮೈಸೂರು, ಮಂಗಳೂರು, ನಿಟ್ಟೆ ಹಾಗೂ ಮೌಂಟ್ ಕಾರ್ಮೆಲ್ ಸೇರಿದಂತೆ ವಿವಿಧ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಮತ್ತು ಬೋರ್ಡ್ ಆಫ್ ಸ್ಟಡೀಸ್ಗಳಲ್ಲಿ ಅಧ್ಯಕ್ಷೆ ಹಾಗೂ ಸದಸ್ಯೆಯಾಗಿ ಡಾ. ಮಮತಾ ಬಿ. ಸೇವೆ ಸಲ್ಲಿಸಿದ್ದಾರೆ.

ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ನಿಕಟಪೂರ್ವ ಕುಲಪತಿ ಡಾ. ಅಶೋಕ ಎಸ್.ಬಿ., ಮೌಲ್ಯಮಾಪನ ಕುಲಸಚಿವ ಪ್ರೊ. ವೈ. ರಮೇಶ್, ಆಡಳಿತ ಕುಲಸಚಿವೆ ಸೀಮಾ ಬಿ. ನಾಯಕ್, ಪ್ರೊ. ಆರ್.ಕೆ. ವಾಣಿಶ್ರೀ ಸೇರಿದಂತೆ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Author

ANU News

Follow Me
Other Articles
Previous

ಹುಬ್ಬಳ್ಳಿಯಲ್ಲಿ ₹700 ಕೋಟಿ ವೆಚ್ಚದ ಕೆಎಲ್ಇ ವೈದ್ಯಕೀಯ ಕ್ಯಾಂಪಸ್; 1,200 ಹಾಸಿಗೆಗಳ ಸೌಲಭ್ಯ

Next

Dr Mamatha B takes charge as acting VC of Maharani Cluster University

Recent Posts

  • ಜೈವಿಕ ಇಂಧನ ಕ್ಷೇತ್ರದಲ್ಲಿ ಕರ್ನಾಟಕ–ಥೈಲ್ಯಾಂಡ್ ದ್ವಿಪಕ್ಷೀಯ ಸಹಕಾರಕ್ಕೆ ಪ್ರಸ್ತಾವನೆ: ಎಸ್. ಈ. ಸುಧೀಂದ್ರ
  • CWRC Directs Karnataka to Release 3,000 Cusecs Daily to Tamil Nadu for 15 Days
  • ಕಾವೇರಿ ವಿವಾದ: 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ
  • Sasikumar to Play INA Officer in World War II Drama ‘Death Railway’
  • ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ಚಾಲನೆ: ನ.10ರವರೆಗೆ ಜಾತ್ರಾ ಮಹೋತ್ಸವ, ಕಾಲ್ನಡಿಗೆಯಲ್ಲಿ ಹರಿದು ಬಂದ ಭಕ್ತಸಾಗರ
Copyright 2026 — ANU News. All rights reserved. Blogsy WordPress Theme