Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಹಲವು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಮಳೆ ಸಾಧ್ಯತೆ

By ANU News
September 21, 2026 1 Min Read
0

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ 21 ಮತ್ತು 22ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಸೆ.21ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು.

ಸೆ.22ರಂದು ಹಲವು ಜಿಲ್ಲೆಗಳಲ್ಲಿ ಮಳೆ

ಸೆ.22ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸೆ.22ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Author

ANU News

Follow Me
Other Articles
Previous

ಜಾತಿ ಆಧಾರಿತ ತಾರತಮ್ಯ ಹಿಂದೂ ಸಂಸ್ಕೃತಿಯ ಭಾಗವಲ್ಲ: ದತ್ತಾತ್ರೇಯ ಹೊಸಬಾಳೆ

Next

Two-day rain alert for Karnataka: IMD forecasts heavy showers, thunderstorms

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Declare Gadag drought-hit or I’ll quit’: HK Patil puts pressure on govt
    • ಅಕ್ಟೋಬರ್ 10ರೊಳಗೆ ಗದಗ ಬರಪೀಡಿತ ಘೋಷಿಸಿ; ಇಲ್ಲದಿದ್ದರೆ ರಾಜೀನಾಮೆ: ಎಚ್.ಕೆ. ಪಾಟೀಲ
    • Sourav Gurjar booked, arrested in Hyderabad following woman’s cheating complaint
    • ‘ಮಹಾಭಾರತ’ದ ಭೀಮ ಬಂಧನ! ನಟ ಸೌರವ್ ಗುರ್ಜರ್ ವಿರುದ್ಧ ವಂಚನೆ ಆರೋಪ
    • Karnataka legislature gears up for three-day session amid row over Kasturirangan report
    Copyright 2026 — ANU News. All rights reserved. Blogsy WordPress Theme