Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕಡೇಚೂರು–ಬಾಡಿಯಾಳ ಕೈಗಾರಿಕಾ ತ್ಯಾಜ್ಯ ವಿವಾದ: ಬೇಜವಾಬ್ದಾರಿ ಅಧಿಕಾರಿ ಅಮಾನತು ಮಾಡಿ; ಕಠಿಣ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

By ANU News
September 28, 2026 1 Min Read
0

ಬೆಂಗಳೂರು: ಯಾದಗಿರಿ ಜಿಲ್ಲೆಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕೈಗಾರಿಕೆಗಳಿಂದ ಸಂಸ್ಕರಿಸದ ಹಾಗೂ ಕಲುಷಿತ ತ್ಯಾಜ್ಯ ನೀರು ಹೊರಬಂದು ಭೀಮಾ ನದಿಗೆ ಸೇರುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (KSPCB) ನಿರ್ದೇಶನ ನೀಡಿದ್ದಾರೆ.

ಮಂಡಳಿಯ ಸದಸ್ಯ ಕಾರ್ಯದರ್ಶಿ ಆರ್. ಗೊಕುಲ್ ಅವರಿಗೆ ನಿರ್ದೇಶನ ನೀಡಿರುವ ಸಚಿವರು, ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೈಗಾರಿಕೆಗಳ ತ್ಯಾಜ್ಯ ನೀರನ್ನು ಸೂಕ್ತವಾಗಿ ಸಂಸ್ಕರಿಸದೆ ನದಿ ಹಾಗೂ ಜಲಮೂಲಗಳಿಗೆ ಹರಿಸುವುದರಿಂದ ಜಲಮಾಲಿನ್ಯ ಉಂಟಾಗುವುದರ ಜತೆಗೆ ಜನರು, ಜಾನುವಾರುಗಳು, ಕೃಷಿ ಚಟುವಟಿಕೆಗಳು ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸಚಿವರು ಹೇಳಿದ್ದಾರೆ.

ಸ್ಥಳ ಪರಿಶೀಲನೆ, ಮಾದರಿ ಸಂಗ್ರಹಕ್ಕೆ ಸೂಚನೆ

ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಂಬಂಧಿತ ಕೈಗಾರಿಕೆಗಳ ತಕ್ಷಣ ಸ್ಥಳ ಪರಿಶೀಲನೆ ನಡೆಸಬೇಕು. ಹೊರಹರಿಯುತ್ತಿರುವ ತ್ಯಾಜ್ಯ ನೀರಿನ ಮಾದರಿಗಳನ್ನು ಸಂಗ್ರಹಿಸಿ, ಅವುಗಳ ಗುಣಮಟ್ಟವನ್ನು ವೈಜ್ಞಾನಿಕವಾಗಿ ಪರೀಕ್ಷಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

ನಿಯಮ ಉಲ್ಲಂಘಿಸಿರುವುದು ಕಂಡುಬಂದಲ್ಲಿ ಸಂಬಂಧಿತ ಕೈಗಾರಿಕೆಗಳ ವಿರುದ್ಧ ಯಾವುದೇ ವಿಳಂಬವಿಲ್ಲದೆ ಕಾನೂನುಬದ್ಧ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶಿಸಿದ್ದಾರೆ.

ಅಧಿಕಾರಿಯ ಅಮಾನತು, ವಿಚಾರಣೆಗೆ ಸೂಚನೆ

ಇಂತಹ ಬೇಜವಾಬ್ದಾರಿ ಕಾರ್ಯವೈಖರಿಗೆ ಕಾರಣರಾದ ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಿ, ವಿಚಾರಣೆ ನಡೆಸಬೇಕು. ಕೈಗೊಂಡ ಕ್ರಮಗಳ ಕುರಿತು ಅನುಸರಣಾ ವರದಿಯನ್ನು ಸಲ್ಲಿಸುವಂತೆಯೂ ಸಚಿವರು ಸೂಚಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯು ಕಟ್ಟುನಿಟ್ಟಿನ ಮೇಲ್ವಿಚಾರಣೆ ಹಾಗೂ ಅಗತ್ಯ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಮಲಿಂಗಾರೆಡ್ಡಿ ನಿರ್ದೇಶಿಸಿದ್ದಾರೆ.

Author

ANU News

Follow Me
Other Articles
Previous

ಅಂತರಧರ್ಮ ಸಂವಾದ: ಪರಸ್ಪರ ನಂಬಿಕೆ ಮತ್ತು ಹಂಚಿಕೆಯ ಜವಾಬ್ದಾರಿ

Next

Yadgir industrial waste row: K’taka Minister Ramalinga Reddy orders action against polluting units, suspension of official

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Civic workers deserve respect, welfare measures: CT Ravi
    • ಪೌರಕಾರ್ಮಿಕರ ಶ್ರಮಕ್ಕೆ ಗೌರವ ನೀಡುವುದು ಸಮಾಜದ ಜವಾಬ್ದಾರಿ: ಡಾ.C.T.ರವಿ
    • India will safeguard security, strategic autonomy when threatened: Rajnath Singh
    • Yadgir industrial waste row: K’taka Minister Ramalinga Reddy orders action against polluting units, suspension of official
    • ಕಡೇಚೂರು–ಬಾಡಿಯಾಳ ಕೈಗಾರಿಕಾ ತ್ಯಾಜ್ಯ ವಿವಾದ: ಬೇಜವಾಬ್ದಾರಿ ಅಧಿಕಾರಿ ಅಮಾನತು ಮಾಡಿ; ಕಠಿಣ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ
    Copyright 2026 — ANU News. All rights reserved. Blogsy WordPress Theme