Skip to content
ANU News
ANU News
  • Home
  • Home
ANU News
ANU News
  • Home
  • Home
ಪ್ರಾದೇಶಿಕ

ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಹಲವು ಯೋಜನೆಗಳಿಗೆ ರಾಜ್ಯ ಸಂಪುಟ ಅಸ್ತು

By ANU News
May 22, 2026 2 Min Read
0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ನೀರಾವರಿ, ಮೂಲಸೌಕರ್ಯ ಮತ್ತು ಆಡಳಿತಾತ್ಮಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಎನ್‌ಜಿಇಎಫ್ (ಹುಬ್ಬಳ್ಳಿ) ಸಂಸ್ಥೆಗೆ ನೀಡಲಾಗಿದ್ದ 2 ಕೋಟಿ ರೂ. ದುಡಿಯುವ ಬಂಡವಾಳ ಸಾಲ ಹಾಗೂ ಅದರ ಮೇಲಿನ 4 ಕೋಟಿ ರೂ. ಬಡ್ಡಿ ಸೇರಿ ಒಟ್ಟು 6 ಕೋಟಿ ರೂ. ಮತ್ತು 10 ಕೋಟಿ ರೂ. ಬಡ್ಡಿರಹಿತ ಸಾಲವನ್ನು ಈಕ್ವಿಟಿಯಾಗಿ ಪರಿವರ್ತಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ಮತ್ತು ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ತಲಾ 50 ಹಾಸಿಗೆಗಳ ತಾಯಿ-ಮಗು ಆರೈಕೆ (MCH) ಆಸ್ಪತ್ರೆ ನಿರ್ಮಾಣಕ್ಕೆ ಒಟ್ಟು 38 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ನಮ್ಮ ಕ್ಲಿನಿಕ್‌ಗಳಿಗೆ ಅಗತ್ಯವಿರುವ ಪ್ರಯೋಗಾಲಯ ಉಪಕರಣಗಳು ಹಾಗೂ RD KIT ಖರೀದಿಗೆ 22 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ.

ಬೆಂಗಳೂರು, ಧಾರವಾಡ, ಬೆಳಗಾವಿ ಮತ್ತು ಬಳ್ಳಾರಿ ಕೇಂದ್ರ ಕಾರಾಗೃಹಗಳ ಆವರಣದಲ್ಲಿ ಐಒಸಿಎಲ್, ಎಚ್‌ಪಿಸಿಎಲ್ ಮತ್ತು ಬಿಪಿಸಿಎಲ್ ಕಂಪನಿಗಳ ಮೂಲಕ ಪೆಟ್ರೋಲ್ ಬಂಕ್ ಮತ್ತು ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

32 ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ (GTTC) ಹೊಸ ಯಂತ್ರೋಪಕರಣ ಮತ್ತು ಸಲಕರಣೆಗಳ ಖರೀದಿಗೆ 90 ಕೋಟಿ ರೂ. ಮಂಜೂರಾಗಿದೆ.

ಕನಕಪುರ ನಗರಸಭೆ ವ್ಯಾಪ್ತಿಯಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ 20 ಕೋಟಿ ರೂ. ವೆಚ್ಚದಲ್ಲಿ ಮಳೆನೀರು ಚರಂಡಿ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರದ 17.35 ಎಕರೆ ಜಮೀನನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಹಸ್ತಾಂತರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಯಚೂರು ಜಿಲ್ಲೆಯ ಮಟಮಾರಿ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ 182.70 ಕೋಟಿ ರೂ. ವೆಚ್ಚದ ಯೋಜನೆಗೂ ಅನುಮೋದನೆ ದೊರೆತಿದೆ. ಇದರಿಂದ 8,320 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತದೆ.

69,922 ಅಂಗನವಾಡಿಗಳಿಗೆ ಶಾಲಾಪೂರ್ವ ಶಿಕ್ಷಣ ಕಿಟ್‌ಗಳನ್ನು 20.98 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಹಿಂದುಳಿದ ವರ್ಗಗಳ 500 ವಿದ್ಯಾರ್ಥಿಗಳಿಗೆ ವಸತಿ ಸಹಿತ ಪಿಯುಸಿ ಶಿಕ್ಷಣದೊಂದಿಗೆ NEET, JEE ಮತ್ತು CET ಪರೀಕ್ಷಾ ಪೂರ್ವ ತರಬೇತಿ ನೀಡಲು 15 ಕೋಟಿ ರೂ. ವೆಚ್ಚದ ಯೋಜನೆಗೂ ಸಚಿವ ಸಂಪುಟ ಅನುಮೋದನೆ ನೀಡಿದೆ.

ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿವರ್ತನೆ (KSHET) ಯೋಜನೆಯಡಿ 802 ಕೋಟಿ ರೂ. ಮೌಲ್ಯದ ಮುಂಗಡ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇದೇ ವೇಳೆ, ನಿವೃತ್ತ ನ್ಯಾಯಮೂರ್ತಿ P. N. Desai ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಮಳೆಗಾಲದ ಅಧಿವೇಶನದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಹೆಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

Author

ANU News

Follow Me
Other Articles
Previous

ಗುಜರಾತ್ ವಿರುದ್ಧ ಹೀನಾಯ ಸೋಲು; ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಕನಸು ಭಗ್ನ

Next

ಅನುಮಾನಾಸ್ಪದ ಚಟುವಟಿಕೆ ಕಂಡರೆ 139ಕ್ಕೆ ಮಾಹಿತಿ ನೀಡಿ; ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮನವಿ

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಮೊಬೈಲ್ ಟಾರ್ಚ್‌ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್
    • BJP Alleges Irregularities in Voter List Revision, Targets Congress Over SIR Process
    • ಅಕ್ರಮ ವಲಸಿಗರು, ನುಸುಳುಕೋರರಿಗೆ ಮಣೆಹಾಕುತ್ತಿರುವ ಕಾಂಗ್ರೆಸ್‌ ಗೆ ಜನರಿಂದ ತಕ್ಕ ಪಾಠ; ಬಿಜೆಪಿ
    • Eight Killed in Separate Accidents in Andhra Pradesh and Telangana
    • ಆಂಧ್ರ, ತೆಲಂಗಾಣದಲ್ಲಿ ಭೀಕರ ಅಪಘಾತಗಳು; ಒಟ್ಟು 8 ಮಂದಿ ದುರ್ಮರಣ
    Copyright 2026 — ANU News. All rights reserved. Blogsy WordPress Theme