Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕತಾರ್‌ನಲ್ಲಿ ನ.6ರಂದು ‘ಕರುನಾಡ ವೈಭವ 2026’ ರಾಜ್ಯೋತ್ಸವ ಸಂಭ್ರಮ; ಪೋಸ್ಟರ್‌ ಅನಾವರಣ

By ANU News
October 4, 2026 2 Min Read
0

ಹಿರಿಯ ನಟಿ ಉಮಾಶ್ರೀಗೆ ‘ಕತಾರ್ ಕನ್ನಡ ಸಮ್ಮಾನ’ ಪ್ರದಾನ; ಹಾಸ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ದೋಹಾ, ಕತಾರ್: ಕರ್ನಾಟಕ ಸಂಘ ಕತಾರ್ (KSQ) ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಕರುನಾಡ ವೈಭವ 2026’ ಕಾರ್ಯಕ್ರಮದ ಅಧಿಕೃತ ಪೋಸ್ಟರ್‌ನ್ನು ಗಣ್ಯರ ಸಮ್ಮುಖದಲ್ಲಿ ಅನಾವರಣಗೊಳಿಸಲಾಯಿತು.

ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರಕ್ಕೆ (ICC) ಸಂಯೋಜಿತವಾಗಿರುವ ಕರ್ನಾಟಕ ಸಂಘ ಕತಾರ್ ಈ ಕಾರ್ಯಕ್ರಮವನ್ನು ನವೆಂಬರ್ 6ರಂದು ಶುಕ್ರವಾರ ಸಂಜೆ 4 ಗಂಟೆಯಿಂದ ಅಲ್ ವಕ್ರಾದ ಡಿಪಿಎಸ್ ಎಂಐಎಸ್ ಸಭಾಂಗಣದಲ್ಲಿ ಆಯೋಜಿಸಿದೆ.

ಸಂಘದ ಪ್ರಧಾನ ಕಾರ್ಯದರ್ಶಿ ಸುಜಿತ್ ಕುಮಾರ್ ಹೊಸದುರ್ಗ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅಧ್ಯಕ್ಷೀಯ ಭಾಷಣ ಮಾಡಿ, ರಾಜ್ಯೋತ್ಸವದ ಯಶಸ್ಸಿಗೆ ಸಂಘದ ಸದಸ್ಯರು ಹಾಗೂ ಕತಾರ್‌ನ ಕನ್ನಡಪರ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ಮನವಿ ಮಾಡಿದರು.

ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು, ಉಪಾಧ್ಯಕ್ಷ ಅನಿಲ್ ಭಾಸಗಿ, ಐಸಿಬಿಎಫ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂಘದ ಮಾಜಿ ಅಧ್ಯಕ್ಷ ದೀಪಕ್ ಶೆಟ್ಟಿ, ಸಲಹಾ ಸಮಿತಿ ಅಧ್ಯಕ್ಷ ಡಾ. ರವಿ ಶೆಟ್ಟಿ, ಸದಸ್ಯರಾದ ಡಾ. ಸಂಜಯ್ ಕುದರಿ, ಮಹೇಶ್ ಗೌಡ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಮತ್ತು ಪ್ರತಿನಿಧಿಗಳು ಪೋಸ್ಟರ್ ಅನಾವರಣದಲ್ಲಿ ಭಾಗವಹಿಸಿದ್ದರು. ಸಂಘದ ಉಪಾಧ್ಯಕ್ಷ ಅನಿಲ್ ಭಾಸಗಿ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಹಿರಿಯ ಕನ್ನಡ ಚಲನಚಿತ್ರ ನಟಿ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಉಮಾಶ್ರೀ ಅವರಿಗೆ ‘ಕತಾರ್ ಕನ್ನಡ ಸಮ್ಮಾನ’ ಪ್ರದಾನ ಮಾಡಲಾಗುವುದು. ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಅವರು, ಸಾರ್ವಜನಿಕ ಜೀವನದಲ್ಲಿಯೂ ಸೇವೆ ಸಲ್ಲಿಸಿದ್ದು, ರಾಜ್ಯದ ಮಾಜಿ ಸಚಿವೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಹಾಸ್ಯ, ಸಂಗೀತದ ರಸದೌತಣ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಘವೇಂದ್ರ (ರಾಗಿಣಿ), ಜಗ್ಗಪ್ಪ ಹಾಗೂ ಸುಷ್ಮಿತಾ ಹಾಸ್ಯ ಕಾರ್ಯಕ್ರಮದ ಮೂಲಕ ರಂಜಿಸಲಿದ್ದಾರೆ. ‘ಸಾ ರೇ ಗ ಮ ಪ’ ಖ್ಯಾತಿಯ ಮೆಹಬೂಬ್ ಸಾಬ್ ಮತ್ತು ರೇವಣಸಿದ್ಧ ಫುಲಾರಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಪ್ರಣಿತಾ ಕಾರ್ಯಕ್ರಮ ನಿರೂಪಿಸಲಿದ್ದಾರೆ.

ಇದರೊಂದಿಗೆ ಕರ್ನಾಟಕ ಸಂಘ ಕತಾರ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರಿಂದ ಸಂಗೀತ, ನೃತ್ಯ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು ನಡೆಯಲಿವೆ. ಕನ್ನಡ ಭಾಷೆ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಈ ಕಾರ್ಯಕ್ರಮವು ಕತಾರ್‌ನ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ನಿರೀಕ್ಷೆಯಿದೆ ದೋಹಾ – ಕತಾರ್ ನ ಭಾರತೀಯ ರಾಯಭಾರ ಕಚೇರಿ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಯೋಗಿ ಸಂಸ್ಥೆ, ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ತಿಳಿಸಿದ್ದಾರೆ.

ಹಾಸ್ಯ, ಸಂಗೀತ, ಸಾಂಸ್ಕೃತಿಕ ಪ್ರದರ್ಶನ ಹಾಗೂ ಸನ್ಮಾನದ ಸಂಗಮವಾಗಿರುವ ‘ಕರುನಾಡ ವೈಭವ 2026’ ರಾಜ್ಯೋತ್ಸವದ ಸಂಭ್ರಮಕ್ಕೆ ವಿಶೇಷ ಮೆರುಗು ನೀಡಲಿದೆ ಎಂದು ಸುಬ್ರಹ್ಮಣ್ಯ ಹೆಬ್ಬಾಗಿಲು ತಿಳಿಸಿದ್ದಾರೆ.

Author

ANU News

Follow Me
Other Articles
Previous

‘Karunada Vaibhava 2026’: Qatar Kannada Sangha to honour actor Umashree on November 6

Next

India finish Aichi-Nagoya Asian Games with 85 medals; Doha takes over as 2030 host

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ಅಂಬರೀಶ್’ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡಿ: ಸರ್ಕಾರಕ್ಕೆ ಪ್ರಸ್ತಾವನೆ ರಾಮಲಿಂಗಾ ರೆಡ್ಡಿ ಪ್ರಸ್ತಾವನೆ
    • Protest march in Byndoor over alleged cattle theft
    • ಗೋಕಳ್ಳತನ ಖಂಡಿಸಿ ಬೈಂದೂರಿನಲ್ಲಿ ಭವ್ಯ ಪಾದಯಾತ್ರೆ: ಗೋಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ;
    • ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ: ಭಾರತ ತಂಡ ಪ್ರಕಟ
    • Ramalinga Reddy proposes posthumous ‘Karnataka Ratna’ for actor Ambarish
    Copyright 2026 — ANU News. All rights reserved. Blogsy WordPress Theme