ವಂದೇ ಮಾತರಂಗೆ ಅಗೌರವ: ಕಾಂಗ್ರೆಸ್ ಕ್ಷಮೆಯಾಚಿಸಲಿ ಎಂದ ಅಮಿತ್ ಶಾ
ಚಿತ್ತೋರ್‌ಗಢ: ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಘಟನೆಗಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವಂದೇ ಮಾತರಂ’ ಗಾಯನವನ್ನು ಮಧ್ಯದಲ್ಲೇ ನಿಲ್ಲಿಸಿರುವುದು ದೇಶಕ್ಕೆ ಮಾಡಿದ ಅವಮಾನ ಎಂದು ಟೀಕಿಸಿದರು. ಈ ಕೃತ್ಯವನ್ನು ದೇಶದ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ನ ಮತಬ್ಯಾಂಕ್ ರಾಜಕಾರಣದಿಂದಾಗಿ ‘ವಂದೇ ಮಾತರಂ’ನ ಮಹತ್ವವನ್ನು ಪಕ್ಷ ಮರೆತಿದೆ ಎಂದು ಅಮಿತ್ ಶಾ ಆರೋಪಿಸಿದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಈ ಗೀತೆಯ ಪ್ರೇರಣೆಯಿಂದ ಸಾವಿರಾರು ಹೋರಾಟಗಾರರು ತ್ಯಾಗ ಮಾಡಿದ್ದಾರೆ ಎಂದರು.
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಗೀತೆಯ ಗಾಯನದ ವೇಳೆ ಪಕ್ಷದ ಹಿರಿಯ ನಾಯಕರು ಮಾತನಾಡುತ್ತಿದ್ದುದನ್ನೂ ಶಾ ಟೀಕಿಸಿದರು. ಗೀತೆಯನ್ನು ಅಪೂರ್ಣವಾಗಿ ನಿಲ್ಲಿಸಿದ ಬಗ್ಗೆ ಕಾಂಗ್ರೆಸ್ ನಾಚಿಕೆಪಡಬೇಕು ಎಂದು ಹೇಳಿದರು.
ಚಿತ್ತೋರ್‌ಗಢದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಅಮಿತ್ ಶಾ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು