Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರಾಯರೆಡ್ಡಿ ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿಸಿ, ಇಲ್ಲವೇ ಸಚಿವ ಸ್ಥಾನದಿಂದ ವಜಾ ಮಾಡಿ- ಆರ್. ಅಶೋಕ್

By Anu News
August 31, 2026 1 Min Read
0

ಬೆಂಗಳೂರು: ಸಚಿವ ಬಸವರಾಜ ರಾಯರೆಡ್ಡಿ ಅವರ ಧಾರ್ಮಿಕ ಹೇಳಿಕೆಯನ್ನು ಖಂಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಮಧ್ಯಪ್ರವೇಶಿಸಿ ಸಚಿವರಿಂದ ಸಾರ್ವಜನಿಕ ಕ್ಷಮೆಯಾಚನೆ ಮಾಡಿಸಬೇಕು. ಇಲ್ಲವಾದಲ್ಲಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, “ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ- ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ’!” ಎಂದು ವ್ಯಂಗ್ಯವಾಡಿದ್ದಾರೆ.

ಸಚಿವ ಬಸವರಾಜ ರಾಯರೆಡ್ಡಿ ಅವರು “ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ” ಎಂದು ಹೇಳಿರುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

“ಧರ್ಮದ ವಿಚಾರದಲ್ಲಿ ಪ್ರತಿಯೊಬ್ಬರಿಗೂ ಅವರದೇ ಆದ ವೈಯಕ್ತಿಕ ನಂಬಿಕೆ ಇರಬಹುದು. ಆದರೆ ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಕೋಟ್ಯಂತರ ಜನರ ಆರಾಧನೆ, ಮಠ-ಮಾನ್ಯಗಳು ಮತ್ತು ಸನಾತನ ಪರಂಪರೆಯ ಬಗ್ಗೆ ಹಗುರವಾಗಿ ಮಾತನಾಡುವುದು ಖಂಡನೀಯ,” ಎಂದು ಅವರು ಹೇಳಿದ್ದಾರೆ.

ರಾಯರೆಡ್ಡಿ ಅವರ ಹೇಳಿಕೆಗಿಂತಲೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೌನವೇ ಜನರಲ್ಲಿ ಹೆಚ್ಚಿನ ಆಕ್ರೋಶ ಮೂಡಿಸಿದೆ ಎಂದು ಅಶೋಕ್ ಟೀಕಿಸಿದ್ದಾರೆ. “ಹಿಂದೂಗಳ ಭಾವನೆಗೆ ಧಕ್ಕೆಯಾದರೂ ಪರವಾಗಿಲ್ಲ, ಸಚಿವರನ್ನು ರಕ್ಷಿಸುವುದೇ ಸರ್ಕಾರದ ಉದ್ದೇಶವೇ?” ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಹೇಳಿಕೆಯನ್ನು ಬಹಿರಂಗವಾಗಿ ಖಂಡಿಸಬೇಕು. ರಾಯರೆಡ್ಡಿ ಅವರಿಂದ ಹಿಂದೂ ಸಮುದಾಯದ ಕ್ಷಮೆಯಾಚನೆ ಮಾಡಿಸಬೇಕು. ಅವರು ಕ್ಷಮೆ ಕೇಳಲು ಸಿದ್ಧರಿಲ್ಲದಿದ್ದರೆ ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಮಾಡದಿದ್ದರೆ ಸರ್ಕಾರದ ನಿಲುವಿನ ಬಗ್ಗೆ ಹಲವು ಪ್ರಶ್ನೆಗಳು ಮೂಡಲಿವೆ ಎಂದು ಅಶೋಕ್ ಹೇಳಿದ್ದಾರೆ. “ಹಿಂದೂಗಳ ಧಾರ್ಮಿಕ ಭಾವನೆ ದೊಡ್ಡದೋ ಅಥವಾ ಸಚಿವರ ಕುರ್ಚಿ ಮತ್ತು ಮತಬ್ಯಾಂಕ್ ದೊಡ್ಡದೋ?” ಎಂದು ಮುಖ್ಯಮಂತ್ರಿ ಅವರನ್ನು ಪ್ರಶ್ನಿಸಿದ್ದಾರೆ.

ರಾಯರೆಡ್ಡಿ ಅವರ ಹೇಳಿಕೆ ವೈಯಕ್ತಿಕ ಅಭಿಪ್ರಾಯವೇ ಅಥವಾ ಸರ್ಕಾರದ ನಿಲುವಿಗೆ ಸಂಬಂಧಿಸಿದುದೇ ಎಂಬುದನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು. ಈ ವಿಚಾರದಲ್ಲಿ ರಾಜ್ಯದ ಜನತೆ ಸರ್ಕಾರದ ನಡೆ ಗಮನಿಸುತ್ತಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.

Author

Anu News

Follow Me
Other Articles
Previous

ISIS-linked Al-Hind case: Accused Syed Fasiur Rehman convicted, fined ₹48,000

Next

‘What matters more, Hindu sentiments or vote bank?’ Ashoka attacks DK Shivakumar

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Gyanyogi Sri Siddeshwara Swamiji Arboretum inaugurated in Karnataka’s Savalagasanga
    • ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    • ‘What matters more, Hindu sentiments or vote bank?’ Ashoka attacks DK Shivakumar
    • ರಾಯರೆಡ್ಡಿ ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿಸಿ, ಇಲ್ಲವೇ ಸಚಿವ ಸ್ಥಾನದಿಂದ ವಜಾ ಮಾಡಿ- ಆರ್. ಅಶೋಕ್
    • ISIS-linked Al-Hind case: Accused Syed Fasiur Rehman convicted, fined ₹48,000
    Copyright 2026 — ANU News. All rights reserved. Blogsy WordPress Theme