Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಮನೆಗಳ್ಳರಿಗೆ, ವಾಹನ ಕಳ್ಳರಿಗೆ ಖಾಕಿ ಖೆಡ್ಡಾ.. ಕಳವು ಮಾಲು ಸ್ವೀಕರಿಸಿದವರೂ ಅಂದರ್.. ವೈಟ್ ಫೀಲ್ಡ್ ಪೊಲೀಸರ ಯಶಸ್ವೀ ಕಾರ್ಯಾಚರಣೆ..

By ANU News
July 30, 2026 1 Min Read
0

ಬೆಂಗಳೂರು: ಬೆಂಗಳೂರು ನಗರದ ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ₹81 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಿಂದ ಅವಲಹಳ್ಳಿ ಹಾಗೂ ಹೊಸಕೋಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂರು ಮನೆಗಳ್ಳತನ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 3ರಂದು ಮನೆಗೆ ಬೀಗ ಹಾಕಿ ತೆರಳಿದ್ದ ಕುಟುಂಬ, ಜುಲೈ 5ರಂದು ಮರಳಿದಾಗ ಮನೆ ಬಾಗಿಲು ಮುರಿದು ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ಸುಮಾರು ₹5 ಲಕ್ಷ ನಗದು ಕಳವಾಗಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ದಾಖಲಾದ ದೂರಿನ ಮೇರೆಗೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಪ್ರಮುಖ ಆರೋಪಿ ಕಳವು ಮಾಡಿದ ಚಿನ್ನಾಭರಣವನ್ನು ಇತರ ಇಬ್ಬರು ಆರೋಪಿಗಳ ಮೂಲಕ ಅಡಮಾನ ಇಡುವುದು ಹಾಗೂ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ 475.04 ಗ್ರಾಂ ಚಿನ್ನಾಭರಣ (ಸುಮಾರು ₹66.50 ಲಕ್ಷ ಮೌಲ್ಯ), ₹9.50 ಲಕ್ಷ ನಗದು ಹಾಗೂ ₹5 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಮುಖ ಆರೋಪಿಯ ವಿರುದ್ಧ ಈ ಹಿಂದೆ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಇನ್ನೊಂದು ಪ್ರಕರಣದಲ್ಲಿ ಮದುವೆ ಮಂಟಪಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ₹47.60 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಅವಲಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮದುವೆ ಮಂಟಪಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಸಾರ್ವಜನಿಕರ ಸಹಕಾರದಿಂದ ಹಿಡಿದ ಪೊಲೀಸರು ಆತನಿಂದ 340 ಗ್ರಾಂ ತೂಕದ ₹47.60 ಲಕ್ಷ ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ವೈಟ್ ಫೀಲ್ಡ್ ಡಿಸಿಪಿ ಸೈದುಲು ಅಡಾವತ್ ಮಾರ್ಗದರ್ಶನದಲ್ಲಿ ವೈಟ್ ಫೀಲ್ಡ್ ಎಸಿಪಿ ರೀನಾ ಸುವರ್ಣ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆ ಮೂಲಕ ಅವಲಹಳ್ಳಿ ಪೊಲೀಸ್ ಠಾಣೆಯ ನಾಲ್ಕು ಹಾಗೂ ಬಾಗಲೂರು ಪೊಲೀಸ್ ಠಾಣೆಯ ಒಂದು ಸೇರಿದಂತೆ ಒಟ್ಟು ಐದು ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Author

ANU News

Follow Me
Other Articles
Previous

Over 2.84 lakh Andhra fishers to get accident insurance cover under Central scheme

Next

ನ್ಯಾಯ ವಿತರಣೆಯಲ್ಲಿ ಡಿಜಿಟಲ್ ಕ್ರಾಂತಿ: ಪಾರದರ್ಶಕತೆ, ವೇಗಕ್ಕೆ ಕೇಂದ್ರದ ಒತ್ತು

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • ‘Operation Mukt’ in Bengaluru: Whitefield police step up checks for illegal immigrants
    • ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ
    • 8 dead, 10 injured as private bus crashes in Chamba’s hilly terrain
    • ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
    • ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ
    Copyright 2026 — ANU News. All rights reserved. Blogsy WordPress Theme