Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಬೆಂಗಳೂರಿನ ಅಭಿವೃದ್ಧಿಗೆ ₹1 ಲಕ್ಷ ಕೋಟಿ ಹೂಡಿಕೆ: ಡಿ.ಕೆ. ಶಿವಕುಮಾರ್

By ANU News
October 27, 2026 1 Min Read
Comments Off on ಬೆಂಗಳೂರಿನ ಅಭಿವೃದ್ಧಿಗೆ ₹1 ಲಕ್ಷ ಕೋಟಿ ಹೂಡಿಕೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ನಗರದ ಮೂಲಸೌಕರ್ಯ ಅಭಿವೃದ್ಧಿ, ಪ್ರಗತಿಯಲ್ಲಿರುವ ಯೋಜನೆಗಳು ಹಾಗೂ ಭವಿಷ್ಯದ ಅಭಿವೃದ್ಧಿ ಕಾರ್ಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಬೆಂಗಳೂರಿನ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿ ಪರಿಶೀಲಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಮತ್ತು ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಇದರ ಭಾಗವಾಗಿ 40 ಕಿ.ಮೀ. ಉದ್ದದ ಸುರಂಗ ಮಾರ್ಗಗಳು, 120 ಕಿ.ಮೀ. ಎತ್ತರದ ಕಾರಿಡಾರ್‌ಗಳು ಹಾಗೂ 500 ಕಿ.ಮೀ. ಹೊಸ ರಸ್ತೆ ಸಂಪರ್ಕಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದರ ಜತೆಗೆ 1,500 ಕಿ.ಮೀ. ಪ್ರಮುಖ ಮತ್ತು ಉಪಪ್ರಮುಖ ರಸ್ತೆಗಳನ್ನು ಉನ್ನತೀಕರಿಸುವುದು, 17 ಕಿ.ಮೀ. ಉದ್ದದ ಹೊರ ವರ್ತುಲ ರಸ್ತೆಯನ್ನು ಪುನರಾಭಿವೃದ್ಧಿಗೊಳಿಸುವುದು ಹಾಗೂ 37 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ರಸ್ತೆ ನಿರ್ಮಿಸುವ ಪ್ರಸ್ತಾವನೆಯೂ ಇದೆ. 2027ರ ವೇಳೆಗೆ ಮೆಟ್ರೋ ಜಾಲವನ್ನು ಈಗಿನ 96 ಕಿ.ಮೀ.ನಿಂದ 170 ಕಿ.ಮೀ.ಗೆ ವಿಸ್ತರಿಸುವುದು, 4,500 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸುವುದು ಹಾಗೂ 2030ರ ವೇಳೆಗೆ 150 ಕಿ.ಮೀ. ಉಪನಗರ ರೈಲು ಸಂಪರ್ಕ ಜಾಲ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ನಗರದ ಕುಡಿಯುವ ನೀರಿನ ಅಗತ್ಯ ಪೂರೈಸಲು ಕಾವೇರಿ ನೀರು ಸರಬರಾಜು ಹೆಚ್ಚಿಸುವುದು, ಬೆಂಗಳೂರು ಮಹಾನಗರ ಪ್ರದೇಶದ ವ್ಯಾಪ್ತಿಯ ಹೊರಗಿರುವ ನಗರೀಕರಣಗೊಂಡ 65 ಗ್ರಾಮ ಪಂಚಾಯಿತಿಗಳಲ್ಲಿ ಹಂತ ಹಂತವಾಗಿ ಮೂಲಸೌಕರ್ಯ ಸುಧಾರಿಸುವುದು ಹಾಗೂ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಬಲಪಡಿಸುವುದಕ್ಕೂ ಯೋಜನೆ ರೂಪಿಸಲಾಗಿದೆ.

2037ರಲ್ಲಿ ಬೆಂಗಳೂರಿನ 500ನೇ ವಾರ್ಷಿಕೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಮುಂದಿನ 10 ವರ್ಷಗಳ ಅಭಿವೃದ್ಧಿ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದ್ದು, ಇದಕ್ಕಾಗಿ ಅಂದಾಜು ₹1 ಲಕ್ಷ ಕೋಟಿ ಹೂಡಿಕೆ ಮಾಡುವ ಉದ್ದೇಶವಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ನಗರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾನ ಮತ್ತು ಸಮತೋಲಿತ ಅಭಿವೃದ್ಧಿ ಖಚಿತಪಡಿಸುವುದು ಸರ್ಕಾರದ ಗುರಿಯಾಗಿದೆ. ಅಗತ್ಯ ಅನುದಾನ ಒದಗಿಸುವುದರ ಜತೆಗೆ ಆದ್ಯತೆಯ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ತಮ ಸಂಪರ್ಕ ವ್ಯವಸ್ಥೆ, ಸ್ವಚ್ಛತೆ ಮತ್ತು ಭವಿಷ್ಯದ ಅಗತ್ಯಗಳಿಗೆ ಸಜ್ಜಾಗಿರುವ ಬೆಂಗಳೂರನ್ನು ನಿರ್ಮಿಸುವುದು ಸರ್ಕಾರದ ಸಂಕಲ್ಪವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Author

ANU News

Follow Me
Other Articles
Previous

ಚಿತ್ರದುರ್ಗದ ಸಮೀಪ 120 ಎಕರೆ ಪ್ರದೇಶದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆ

Next

ಕಬ್ಬು ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ನಮ್ಮ ಗುರಿ: ಸಿಎಂ ಡಿ.ಕೆ. ಶಿವಕುಮಾರ್

Recent Posts

  • ಅಶೋಕ್ ಜನಮನ–2026: ‘ರಾಜಕಾರಣವೆಂದರೆ ಜನಸಾಮಾನ್ಯರ ಬದುಕು ಕಟ್ಟಿಕೊಡುವ ಸೇವೆ’ ಎಂದ ಬಿ.ಕೆ. ಹರಿಪ್ರಸಾದ್
  • ಬಾಂಗ್ಲಾದೇಶದ ಪ್ರಜೆ ಸೇರಿ ಐವರ ವಿಚಾರಣೆ: ದಾಖಲೆ ಪರಿಶೀಲನೆ ಬಳಿಕ ಬಿಡುಗಡೆ
  • Bangladeshi National Among Five Questioned in Whitefield, All Released
  • ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್; ವರಿಷ್ಠರಿಗೆ ಕೃತಜ್ಞತೆ
  • Karnatka ASHA Workers to Form Human Chain Around Freedom Park on Seventh Day of Protest
Copyright 2026 — ANU News. All rights reserved. Blogsy WordPress Theme