Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

By Anu News
August 25, 2026 1 Min Read
0

ಬೆಂಗಳೂರು: ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ಎ14 ಆರೋಪಿ ಪ್ರದೋಷ್ ಎಸ್. ರಾವ್ ಮಾಫಿ ಸಾಕ್ಷಿಯಾಗಲು 59ನೇ ಸಿಸಿಹೆಚ್ ನ್ಯಾಯಾಲಯ ಅನುಮತಿ ನೀಡಿದೆ.

ಮಾಫಿ ಸಾಕ್ಷಿಯಾಗಲು ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಅಂಗೀಕರಿಸಿದ್ದು, ಆಗಸ್ಟ್ 25ರಂದು ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಆದೇಶ ಹೊರಡಿಸಿದ್ದಾರೆ.

ಪ್ರದೋಷ್‌ಗೆ ನ್ಯಾಯಾಲಯ ಕೆಲವು ಷರತ್ತುಗಳನ್ನು ವಿಧಿಸಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರು ಜೈಲಿನಲ್ಲೇ ಇರಬೇಕು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಸತ್ಯಾಂಶಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸಬೇಕು ಎಂದು ಸೂಚಿಸಲಾಗಿದೆ.

ಯಾವುದೇ ವಿಚಾರವನ್ನು ಮುಚ್ಚಿಟ್ಟರೆ ಅಥವಾ ಸುಳ್ಳು ಸಾಕ್ಷ್ಯ ನೀಡಿದರೆ ಮಾಫಿ ಸಾಕ್ಷಿ ಸ್ಥಾನವನ್ನು ರದ್ದುಗೊಳಿಸಿ ಮತ್ತೆ ಆರೋಪಿಯನ್ನಾಗಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.

ಮಾಫಿ ಸಾಕ್ಷಿಯಾಗಲು ತಮ್ಮ ಮೇಲೆ ಯಾರಿಂದಲೂ ಪ್ರಭಾವ, ಒತ್ತಡ ಅಥವಾ ಬಲವಂತ ಇರಲಿಲ್ಲ ಎಂದು ಪ್ರದೋಷ್ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವುದಾಗಿ ತಿಳಿದುಬಂದಿದೆ. ಈಗಾಗಲೇ ನ್ಯಾಯಾಲಯ ಪ್ರದೋಷ್‌ಗೆ ಹಲವು ಪ್ರಶ್ನೆಗಳನ್ನು ಕೇಳಿ ಅವರ ಉತ್ತರಗಳನ್ನು ದಾಖಲಿಸಿಕೊಂಡಿದೆ.

ರೇಣುಕಾಸ್ವಾಮಿ ಅಪಹರಣ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳು ಪ್ರದೋಷ್‌ಗೆ ತಿಳಿದಿರಬಹುದು ಎನ್ನಲಾಗಿದ್ದು, ಅವರು ನೀಡಲಿರುವ ಹೇಳಿಕೆಗಳು ಪ್ರಕರಣದ ತನಿಖೆ ಹಾಗೂ ವಿಚಾರಣೆಯಲ್ಲಿ ಮಹತ್ವದ ತಿರುವು ನೀಡುವ ಸಾಧ್ಯತೆಯಿದೆ.

ನ್ಯಾಯಾಲಯದ ಆದೇಶದ ಪ್ರತಿಯನ್ನು ಜೈಲು ಅಧಿಕಾರಿಗಳ ಮೂಲಕ ಪ್ರದೋಷ್‌ಗೆ ತಲುಪಿಸಲಾಗಿದೆ. ಇದೀಗ ಪ್ರದೋಷ್ ನೀಡಲಿರುವ ಹೇಳಿಕೆಯತ್ತ ಪ್ರಕರಣದ ಆರೋಪಿಗಳು ಹಾಗೂ ತನಿಖಾ ತಂಡದ ಗಮನ ನೆಟ್ಟಿದೆ.

Author

Anu News

Follow Me
Other Articles
Previous

Priyank Kharge questions Centre’s ethanol policy: ‘Who gets subsidy, who benefits?’

Next

Darshan case: Accused No. 14 Pradosh turns approver, court allows plea

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Ahead of ‘Toxic’ release, Yash offers prayers at Dharmasthala, Ujire
    • ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ
    • Karnataka plans cloud seeding to tackle rain deficit; ₹27 crore project
    • ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ
    • Darshan case: Accused No. 14 Pradosh turns approver, court allows plea
    Copyright 2026 — ANU News. All rights reserved. Blogsy WordPress Theme