Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ನಾಗೇಂದ್ರ ರಾಜೀನಾಮೆಗೆ ಆಗ್ರಹ: ವಿಕಾಸಸೌಧದ ಗೇಟ್ ಬಳಿ ಬಿಜೆಪಿ ಹೈಡ್ರಾಮಾ

By Anu News
August 24, 2026 1 Min Read
0

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ತೀವ್ರಗೊಂಡಿದ್ದು, ವಿಕಾಸಸೌಧದ ಗೇಟ್ ಬಳಿ ಭಾರಿ ಹೈಡ್ರಾಮಾ ನಡೆದಿದೆ.

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಪರಿಷತ್ ಸದಸ್ಯರಾದ ಸಿ.ಟಿ. ರವಿ, ರವಿಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ವಿಕಾಸಸೌಧದ ಗೇಟ್ ಮುಂಭಾಗದ ರಸ್ತೆಯಲ್ಲೇ ಕುಳಿತು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ತೆರವುಗೊಳಿಸಲು ಪೊಲೀಸರು ಮುಂದಾದಾಗ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಬಳಿಕ ವಶಕ್ಕೆ ಪಡೆದ ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ. ಪ್ರಕರಣದಲ್ಲಿ ಸರ್ಕಾರ ಸಚಿವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜೀನಾಮೆ ಪಡೆಯುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದೆ.

Author

Anu News

Follow Me
Other Articles
Previous

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಸಾಫ್ಟ್‌ವೇರ್ ಮೇಲ್ದರ್ಜೆ: ಪರಮೇಶ್ವರ್

Next

Valmiki Corporation case: BJP steps up protest, leaders detained

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • LHB Coaches to Be Introduced on Two Express Trains Serving Shivamogga
    • ಶಿವಮೊಗ್ಗ ಭಾಗದ ಎರಡು ಎಕ್ಸ್‌ಪ್ರೆಸ್ ರೈಲುಗಳಿಗೆ ಎಲ್‌ಎಚ್‌ಬಿ ಕೋಚ್‌ಗಳ ಅಳವಡಿಕೆ
    • ಸಾಂಪ್ರದಾಯಿಕ ಮೈಸೂರು ದಸರಾದಲ್ಲಿ ಗರಿಗೆದರಿದ ‘ಚಾಮುಂಡೇಶ್ವರಿ ವೈಭವ’
    • Mysuru Dasara Inaugurated on Chamundi Hill with Traditional Rituals
    • ‘Don’t Get Caught’ Rather Than ‘Don’t Be Corrupt’: Ravi C.T. Targets Karnataka CM
    Copyright 2026 — ANU News. All rights reserved. Blogsy WordPress Theme