Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಗೋ ಕಳ್ಳತನ, ಅಕ್ರಮ ಸಾಗಾಟ ತಡೆಗಟ್ಟಲು ಹಿಂದೂ ಜಾಗರಣ ವೇದಿಕೆ ಆಗ್ರಹ

By ANU News
November 10, 2026 1 Min Read
Comments Off on ಗೋ ಕಳ್ಳತನ, ಅಕ್ರಮ ಸಾಗಾಟ ತಡೆಗಟ್ಟಲು ಹಿಂದೂ ಜಾಗರಣ ವೇದಿಕೆ ಆಗ್ರಹ

ಉಡುಪಿ: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಯ್ಯಾಡಿಯಲ್ಲಿ ಅಕ್ರಮವಾಗಿ ಕಾರಿನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯ ಬಳಿಕ ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆ, ಗೋವುಗಳ ಕಳ್ಳತನ ಮತ್ತು ಅಕ್ರಮ ಸಾಗಾಟ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳ್ಳತನ ಹಾಗೂ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಮತ್ತು ದಲ್ಲಾಳಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಹಿಂದೂ ಜಾಗರಣ ವೇದಿಕೆಯ ಬೈಂದೂರು ತಾಲೂಕು ಘಟಕದಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ತಾಲೂಕು ಸಂಯೋಜಕ ಹರೀಶ್ ಸಲ್ಕೋಡ್ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯ ರಾಜೇಶ್ ಆಚಾರ್ಯ ಬೈಂದೂರು, ಬಾಬು ಮಯ್ಯಾಡಿ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

Jagalur Gets Development Projects Worth ₹31.82 Crore: Minister Raghumurthy

Next

Chandrababu Naidu Reviews Fire Incidents, Cyclone Restoration Work in Andhra Pradesh

Recent Posts

  • DRI Seizes 3.7kg of Elephant Tusks in Assam; Armed Suspects Escape
  • Denmark Announces €645 Million Military Aid Package for Ukraine: Zelenskyy
  • Karnataka Assures Minimum Rs 5,000 Drought Relief to Eligible Farmers: Shivakumar
  • ಎಲ್ಲಾ ಅರ್ಹ ರೈತರಿಗೂ ಕನಿಷ್ಠ ₹5,000 ಬರ ಪರಿಹಾರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • US to Step Up Economic Pressure on Iran, Says Marco Rubio
Copyright 2026 — ANU News. All rights reserved. Blogsy WordPress Theme