ಸಂಪುಟ ವಿಸ್ತರಣೆ: 19 ಸಚಿವರ ಪ್ರಮಾಣವಚನ, ಗಾಯತ್ರಿ ಶಾಂತೇಗೌಡಗೆ ಕೊನೆ ಕ್ಷಣದಲ್ಲಿ ಕೈತಪ್ಪಿದ ಅವಕಾಶ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಯಿತು. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಅಂತಿಮಗೊಳಿಸಿದ್ದರೂ, ಕೊನೆ ಕ್ಷಣದಲ್ಲಿ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ಸಂಜೆ 5 ಗಂಟೆಗೆ ನಡೆದ…
ಸಚಿವ ಸ್ಥಾನ ವಂಚಿತರಿಗೆ ಸ್ಪೀಕರ್ ಸೇರಿ ಪ್ರಮುಖ ಹುದ್ದೆಗಳು; ಹೈಕಮಾಂಡ್ನಿಂದ ನಾಲ್ಕು ಹೆಸರು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಕೆಲ ಹಿರಿಯ ಶಾಸಕರಿಗೆ ವಿಧಾನಮಂಡಲದ ಪ್ರಮುಖ ಹುದ್ದೆಗಳನ್ನು ನೀಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ವಿಧಾನಸಭೆಯ ನೂತನ ಸ್ಪೀಕರ್, ಉಪಸಭಾಧ್ಯಕ್ಷ, ವಿಧಾನಪರಿಷತ್ ಸಭಾಪತಿ ಹಾಗೂ ಉಪಸಭಾಪತಿ…
ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಗೊಂದಲ; ಅರ್ಹ ಅಭ್ಯರ್ಥಿಗಳಿಗೆ ತಕ್ಷಣ ನ್ಯಾಯ ಒದಗಿಸಿ: ವಿಜಯೇಂದ್ರ ಆಗ್ರಹ
ಬೆಂಗಳೂರು: ವಿಜಯಪುರದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿನ ಗೊಂದಲದಿಂದ ಅನ್ಯಾಯಕ್ಕೆ ಒಳಗಾದ ಪ್ರತಿಯೊಬ್ಬ ಅರ್ಹ ಉದ್ಯೋಗಾಕಾಂಕ್ಷಿಗೂ ನ್ಯಾಯ ದೊರೆಯುವಂತೆ ರಾಜ್ಯ ಸರ್ಕಾರ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಈ…
ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ, ಹಲವು ಜಿಲ್ಲೆಗಳ ಶಾಲೆಗಳಿಗೆ ರಜೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಆಗಸ್ಟ್ 7ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ…
ಸಂಕಷ್ಟ ಪರಿಹಾರ ಸೂತ್ರ ಜಾರಿಗೊಳಿಸಿ, ರೈತರ ಬೆಳೆಗಳಿಗೆ ಕೂಡಲೇ ನೀರು ಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಶಾಶ್ವತವಾದ ಸಂಕಷ್ಟ ಪರಿಹಾರ ಸೂತ್ರ ಜಾರಿಯಾಗಲೇಬೇಕು. ಇಲ್ಲದಿದ್ದರೆ ರಾಜ್ಯದ ಹಾಗೂ ರೈತರ ಹಿತವನ್ನು ಕಾಪಾಡುವುದು ಕಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ…
ಕಾವೇರಿ ವಿಚಾರದಲ್ಲಿ ರೈತರ ಪರ ಸರ್ಕಾರ ದೃಢ; ಕರ್ನಾಟಕ ಬಂದ್ ಕೈಬಿಡುವಂತೆ ಸಿಎಂ ಮನವಿ
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರ ಮತ್ತು ರಾಜ್ಯದ ಜನರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಾವೇರಿ ವಿಚಾರವಾಗಿ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
ಸೌಹಾರ್ದಯುತ ಪರಿಹಾರವೇ ಆದ್ಯತೆ: ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆಯಲ್ಲಿ ಡಿ.ಕೆ. ಶಿವಕುಮಾರ್
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದವನ್ನು ಸಂಘರ್ಷದ ಮೂಲಕವಲ್ಲ, ಸೌಹಾರ್ದಯುತ ಮಾತುಕತೆಯ ಮೂಲಕವೇ ಬಗೆಹರಿಸುವುದು ರಾಜ್ಯ ಸರ್ಕಾರದ ಆದ್ಯತೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಹಾಗೂ…
“ಕರ್ನಾಟಕದ ಹಕ್ಕಿಗೆ ಧಕ್ಕೆ ಬೇಡ”: ತಮಿಳುನಾಡು ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರವಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಕರ್ನಾಟಕದ ಜನರ ಹಿತಾಸಕ್ತಿ, ಕುಡಿಯುವ ನೀರಿನ ಅಗತ್ಯ ಹಾಗೂ ಸಂವಿಧಾನಬದ್ಧ…
ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ
ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಮತ್ತು ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನೇತ್ರಾವತಿ ನದಿಯ ನೀರಿನ ಹರಿವು ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು,…
ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ
ಮಂಗಳೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಇಟ್ಟುಕೊಂಡು ಸೇವೆಗಾಗಿ ಸಂಭಾಷಣೆ ಎಂಬ ಕಲ್ಪನೆಯ ಮೂಲಕ ಆರಂಭಗೊಂಡ ವೀರಕೇಸರಿ ಬೆಳ್ತಂಗಡಿ ಸಂಘಟನೆ ಕಳೆದ 10 ವರ್ಷ 2 ತಿಂಗಳುಗಳಲ್ಲಿ 210 ಸೇವಾಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ನೊಂದ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವ ಮೂಲಕ ಯಶಸ್ವಿ 10 ನೇ…