ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ
ಬೆಂಗಳೂರು: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ,…
ಬಿಡದಿ ಟೌನ್ಶಿಪ್; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ
ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಯೋಜನೆಗಾಗಿ ಬಿಡದಿ ಹೋಬಳಿಯ ಮೂರು ಗ್ರಾಮಗಳ ಒಟ್ಟು 2,550 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಆದೇಶಿಸಿದೆ. ಅಧಿಸೂಚನೆಯ ಪ್ರಕಾರ ಕೆಜಿ…
ಬಡವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಕ್ರಮ ವ್ಯವಹಾರ; ಸಿಬಿಐ, ಇ.ಡಿ ತನಿಖೆಗೆ ಸಿ.ಟಿ.ರವಿ ಆಗ್ರಹ
ಬೆಂಗಳೂರು: ಚಿಕ್ಕಮಗಳೂರು, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಬಡಜನರ ಹೆಸರಲ್ಲಿ ನಕಲಿ ಖಾತೆಗಳನ್ನು ತೆರೆದು ಅಕ್ರಮವಾಗಿ ಹಣ ವರ್ಗಾವಣೆ ಮಾಡಿ ವಂಚಿಸಿರುವ ಪ್ರಕರಣವನ್ನು ಸಿಬಿಐ ಹಾಗೂ ಇ.ಡಿ ತನಿಖೆಗೆ ವಹಿಸಲು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ…
‘ಶಾಶ್ವತ ನಿವಾಸ ಪ್ರಮಾಣಪತ್ರ’ ಪ್ರಸ್ತಾವನೆ ಕಾನೂನುಬಾಹಿರ; ಒಕ್ಕೂಟ ವ್ಯವಸ್ಥೆಗೂ ಅಪಾಯಕಾರಿ
ಬೆಂಗಳೂರು: ರಾಜ್ಯ ಸರ್ಕಾರವು ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ನೀಡುವ ಅಧಿಕಾರವನ್ನು ಸ್ವತಃ ಪಡೆದುಕೊಳ್ಳಲು ಮುಂದಾಗಿರುವುದು ಕಾನೂನುಬಾಹಿರ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೂ ಧಕ್ಕೆ ತರುವ ಅಪಾಯಕಾರಿ ನಡೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬಿಜೆಪಿ…
ಶಾಶ್ವತ ನಿವಾಸ ಪ್ರಮಾಣಪತ್ರ; ಸರ್ಕಾರದ ನಿರ್ಧಾರ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ
ಬೆಂಗಳೂರು: ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ (PRC) ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತಕ್ಷಣ ಹಿಂಪಡೆಯುವಂತೆ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ…
ಒಂದು ತಿಂಗಳಲ್ಲಿ ರಾಜ್ಯಾದ್ಯಂತ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆ; ಪ್ರತಿ ಸಂಘಕ್ಕೆ ₹10 ಲಕ್ಷ ನೆರವು
ಬೆಂಗಳೂರು: ರಾಜ್ಯ ಸರ್ಕಾರದ ‘ಭಾರತ್ ಜೋಡೋ ಯುವ ಸಂಘ’ ಯೋಜನೆಯಡಿ ಒಂದು ತಿಂಗಳೊಳಗೆ ರಾಜ್ಯಾದ್ಯಂತ ಸಂಘಗಳನ್ನು ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ. ಪ್ರತಿ ಸಂಘದಲ್ಲಿ 100ರಿಂದ 250 ಸದಸ್ಯರು ಇರಲಿದ್ದು, ಸರ್ಕಾರದಿಂದ ₹10 ಲಕ್ಷ ಆರ್ಥಿಕ ನೆರವು ನೀಡಲಾಗುತ್ತದೆ. ಸಚಿವ ಡಾ. ಜಿ. ಪರಮೇಶ್ವರ್ ಈ…
ರಾಜ್ಯದಲ್ಲಿ ಬರದ ಛಾಯೆ: ಕೇಂದ್ರದ ಅಧ್ಯಯನ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಪತ್ರ
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರದ ಅಧ್ಯಯನ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿ ಪರಿಸ್ಥಿತಿ ಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಬರ ನಿರ್ವಹಣೆಗೆ ಅಗತ್ಯ ನೆರವು ನೀಡುವಂತೆಯೂ…
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ್ ನಿರ್ದೋಷಿ ಎಂದು ಕೊನೆಗೂ ಒಪ್ಪಿಕೊಂಡ ಸರ್ಕಾರ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ ವಿಜಯೋತ್ಸವದ ವೇಳೆ 2025ರ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರ…
ರಿಯಲ್ ಎಸ್ಟೇಟ್ ಬಿಟ್ಟು ಜನರ ಸಮಸ್ಯೆ ಕಡೆ ಗಮನ ಹರಿಸಿ; ಸಿಎಂಗೆ ವಿಜಯೇಂದ್ರ ತರಾಟೆ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಸಮಸ್ಯೆಗಳ ಕಡೆ ಗಮನಹರಿಸಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು,…
ಕರ್ನಾಟಕದ ಹಣ ಕಾಂಗ್ರೆಸ್ ಪಕ್ಷದ ನಿಧಿಯಲ್ಲ; ಭಾರತ್ ಜೋಡೋ ಯುವ ಸಂಘ ಯೋಜನೆಗೆ ಆರ್.ಅಶೋಕ್ ಆಕ್ರೋಶ
ಬೆಂಗಳೂರು: ರಾಜ್ಯ ಸರ್ಕಾರ 6,000 ‘ಭಾರತ್ ಜೋಡೋ ಯುವ ಸಂಘ’ ರಚಿಸಲು ಮುಂದಾಗಿರುವ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಸಾರ್ವಜನಿಕ ಹಣವನ್ನು ಕಾಂಗ್ರೆಸ್ ಪಕ್ಷದ ರಾಜಕೀಯ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ…