ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ
ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನು ಬಳಸಲಾಗಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತನಿಖೆಗೆ ಆದೇಶಿಸಿದ್ದಾರೆ. ಗೋಕಾಕ್…
ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ
ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜುಲೈ 7) ಮುಂಜಾನೆ ಹೃದಯ ಸಂಬಂಧಿ ಸಮಸ್ಯೆಯಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಡಿಮೆ ವೆಚ್ಚದ ಹಾಗೂ ಪರಿಸರ ಸ್ನೇಹಿ ತೂಗು ಸೇತುವೆಗಳ ನಿರ್ಮಾಣದ ಮೂಲಕ ದೇಶದ…
ರಾಜ್ಯದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಇಂದು ರಜೆ
ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆ…
ಎಸ್ಐಆರ್ ಕುರಿತು ಬಿಜೆಪಿ–ಜೆಡಿಎಸ್ ದ್ವಂದ್ವ ನಿಲುವು ಪ್ರಶ್ನಿಸಿದ ರಣದೀಪ್ ಸಿಂಗ್ ಸುರ್ಜೇವಾಲ
ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವ್ಯಕ್ತಪಡಿಸುತ್ತಿರುವ ವಿರೋಧವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನಿಸಿದ್ದು, ಅವರ ನಿಲುವಿನಲ್ಲಿ ಸ್ಪಷ್ಟ ದ್ವಂದ್ವವಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್…
ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಮ್ಮಾಜೆ ಸಮೀಪದ ವಿವೇಕ ಭವನದಲ್ಲಿ ನಾಗಶ್ರೀ ಮಿತ್ರ ವೃಂದ ಚಾರಿಟೆಬಲ್ ಟ್ರಸ್ಟ್ ಹಾಗೂ ನಾಗಶ್ರೀ ಮಾತೃ ವೃಂದದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ವನಮಹೋತ್ಸವ–2026 ಕಾರ್ಯಕ್ರಮ ನಡೆಯಿತು. ಪರಿಸರ ಸಂರಕ್ಷಣೆ ಮತ್ತು ಅರಣ್ಯಗಳ ಮಹತ್ವದ ಕುರಿತು ಯುವಪೀಳಿಗೆಯಲ್ಲಿ…
SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ
ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR)-2026 ಕಾರ್ಯಕ್ಕೆ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸಹಾಯಕರಾಗಿ ನಿಯೋಜಿಸಲಾಗಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಗೌರವಧನ ನಿಗದಿಪಡಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (AIUTUC) ಆಗ್ರಹಿಸಿದೆ. ಈ ಸಂಬಂಧ ಸಂಘದ ಅಧ್ಯಕ್ಷ…
ಕುಮಾರಸ್ವಾಮಿಯನ್ನು ಹರಕೆ ಕುರಿ ಮಾಡುತ್ತಿರುವ ಬಿಜೆಪಿ: ಬಿ.ಕೆ. ಹರಿಪ್ರಸಾದ್ ಟೀಕೆ
ಬೆಂಗಳೂರು: ಬಿಜೆಪಿ ನಾಯಕರು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದ ವಿವಿಧ…
ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ
ಮಂಗಳೂರು: ಭಾರತೀಯ ಕ್ಯಾಥೋಲಿಕ್ ಯುವ ಚಳವಳಿ (ICYM) ಮಂಗಳೂರು ಡಯಾಸಿಸ್ನ 2026–27ನೇ ಸಾಲಿನ ಅಧ್ಯಕ್ಷರಾಗಿ ಕ್ರಿಸ್ಟನ್ ಜೋಶುವಾ ಮೆನೆಜಸ್ ದಾಖಲೆ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ರೊಸಾರಿಯೊ ಕ್ಯಾಥೆಡ್ರಲ್ ಹಾಲ್ನಲ್ಲಿ ನಡೆದ 80ನೇ ಐಸಿವೈಎಂ ಸಾರ್ವತ್ರಿಕ ಚುನಾವಣೆಯಲ್ಲಿ ಕ್ರಿಸ್ಟನ್ 269 ಮತಗಳನ್ನು ಪಡೆದು…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಎಂಟು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ,…
ಮೊಬೈಲ್ ಟಾರ್ಚ್ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್
ಬೆಂಗಳೂರು: ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುತ್ತಿದ್ದ ಕೆಕೆಆರ್ಟಿಸಿ (KKRTC) ಬಸ್ನಲ್ಲಿ ಹೆಡ್ಲೈಟ್ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ನಿರ್ವಾಹಕರ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಲಾಗಿದೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಜೆಡಿಎಸ್ ರಾಜ್ಯ ಸರ್ಕಾರ ಮತ್ತು…