ಬೆಂಗಳೂರಿನ ಬೆಳ್ಳಂದೂರು ಬಳಿ 800 ಕೆಜಿಗೂ ಹೆಚ್ಚು ಸ್ಫೋಟಕ ವಶ
ಬೆಂಗಳೂರು: ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಿ ಕಲ್ಲುಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಬೆಳ್ಳಂದೂರು ಠಾಣೆ ಪೊಲೀಸರು 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ…
ನೈಸ್ ಸಂಸ್ಥೆಯ ಅನಧಿಕೃತ ಟೋಲ್ ಸಂಗ್ರಹ ನಿಷೇಧಿಸಿ: ಕುಮಾರಸ್ವಾಮಿ
ಬೆಂಗಳೂರು: ನೈಸ್ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ಅನ್ನು ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿವರವಾದ ಪತ್ರ ಬರೆದಿರುವ ಕುಮಾರಸ್ವಾಮಿ, ಪತ್ರದ…
ಹನೂರು ಗುಂಡಿನ ದಾಳಿ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್. ಅಶೋಕ್ ಆಗ್ರಹ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ. ಮೂವರು ರೈತರ ಸಾವಿನ ಕುರಿತು ಅರಣ್ಯ ಇಲಾಖೆ, ಸ್ಥಳೀಯ…
ಗ್ಯಾರಂಟಿ ಯೋಜನೆಗಳ ಅಂಕಿ-ಅಂಶಗಳಲ್ಲಿ ಗೊಂದಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೋಲ್ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಯೋಜನೆಗಳ ಕುರಿತು ಸರ್ಕಾರ ನೀಡುತ್ತಿರುವ ಅಂಕಿ-ಅಂಶಗಳಲ್ಲಿ ಹೊಂದಾಣಿಕೆ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳ ಕುರಿತು ಶ್ವೇತಪತ್ರ ಹೊರಡಿಸಿ ಸದನಕ್ಕೆ ನಿಖರ ಮಾಹಿತಿ…
ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿ–ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ
ಚಾಮರಾಜನಗರ: ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ಕಾವೇರಿ ವನ್ಯಜೀವಿಧಾಮದ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶಂಕಿತ ವನ್ಯಜೀವಿ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆಯ ಬೆನ್ನಲ್ಲೇ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣದ ಕುರಿತು…
ಮುಂದಿನ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ
ಮಂಡ್ಯ: ಮುಂದಿನ ವರ್ಷದ ಆಗಸ್ಟ್ ಒಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವುದು ಸರ್ಕಾರದ ಗುರಿಯಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ…
ಸ್ವಾತಂತ್ರ್ಯೋತ್ಸವದಂದು ಡಿಕೆಶಿ ಭರಪೂರ ಘೋಷಣೆ; ಉದ್ಯೋಗ, ಕೃಷಿ, ಕೈಗಾರಿಕೆ, ಬೆಂಗಳೂರು ಅಭಿವೃದ್ಧಿಗೆ ಹೊಸ ಯೋಜನೆಗಳು
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಹಲವು ಮಹತ್ವದ ಹೊಸ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಘೋಷಿಸಿದರು. ಯುವಕರಿಗೆ ಉದ್ಯೋಗ, ರೈತರಿಗೆ…
80ನೇ ಸ್ವಾತಂತ್ರ್ಯೋತ್ಸವ: ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಚಲುವರಾಯಸ್ವಾಮಿ
ಮಂಡ್ಯ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಆದರ್ಶಗಳನ್ನು ಸ್ಮರಿಸಿಕೊಂಡು ಸೌಹಾರ್ದತೆ, ಸಹೋದರತ್ವ, ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ತತ್ವಗಳೊಂದಿಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಲ ಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ…
ಕೆಪಿಸಿಸಿ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಮೇಲೆ ಮೊಟ್ಟೆ ದಾಳಿ ಆರೋಪ; ವಿದ್ಯಾರ್ಥಿನಿ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಕೆಪಿಸಿಸಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ‘ಮೊಟ್ಟೆ ದಾಳಿ’ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಪುಣ್ಯ ಸಿ. ನಾಯಕ್ ವಿರುದ್ಧ ನಡೆಯುತ್ತಿದ್ದ ಹೆಚ್ಚಿನ ತನಿಖೆ ಹಾಗೂ ಕ್ರಿಮಿನಲ್ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ…
ಸಾರಿಗೆ ನೌಕರರಿಗೆ ಗುಡ್ನ್ಯೂಸ್; ಬಾಕಿ ವೇತನಕ್ಕೆ ₹170 ಕೋಟಿ ಬಿಡುಗಡೆ
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಬಾಕಿ ವೇತನ ಪಾವತಿಗಾಗಿ ರಾಜ್ಯ ಸರ್ಕಾರ ₹170 ಕೋಟಿ ಬಿಡುಗಡೆ ಮಾಡಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಂಗಳೂರಿನ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ 15ಕ್ಕೂ ಹೆಚ್ಚು ಕಾರ್ಮಿಕ…